ಸರಗೂರು: ಮೊಬೈಲ್ ಮತ್ತು ಟಿವಿ ಮಾಧ್ಯಮದ ಪ್ರಭಾವದಿಂದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಬಳಗದವರು ಗ್ರಾಮೀಣ ಭಾಗದ ಊರ ಯುವಕರಿಗೆ ಪಂದ್ಯಾವಳಿಯನ್ನು ಆಯೋಜಿಸಿ ಅಭಿವೃದ್ಧಿ ಮತ್ತು ಸಂಬಂಧದ ಬೆಸುಗೆಗೆ ಮುನ್ನುಡಿ ಬರೆಯುತ್ತಿರುವುದು ಮಾದರಿಯಾಗಿದೆ ಎಂದು ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ ಹೇಳಿದರು.
ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಮೊದಲನೇಯ ವರ್ಷ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್– 2026 ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾವಳಿಯ ಅಂಬಾರಿ ಹೊತ್ತ ಅರ್ಜುನ ಆನೆ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ಹಾಗೂ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಎಲ್ಲರಲ್ಲೂಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಇದನ್ನು ಆತ್ಮವಿಶ್ವಾಸ ಹಾಗೂ ಮನೋಬಲದಿಂದ ಪ್ರಯೋಗಕ್ಕೆ ಒಳಪಡಿಸಿ ಸಾಧನೆ ಮೆರೆಯುವಂತಾಗಬೇಕು ಎಂದರು.
ಯುವಕರು ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ತೋರಿಸುವ ಕೆಲಸ ಮಾಡಬೇಕು. ದಿನನಿತ್ಯದ ಕೆಲಸಗಳಲ್ಲೇ ತೊಡಗಿಕೊಂಡರೆ ಆಸಕ್ತಿ ಕಳೆದುಕೊಳ್ಳುತ್ತಾರೆ. ರಜಾ ದಿನಗಳಲ್ಲಿ ಆಯೋಜಿಸುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲೇ ಅಡಗಿರುವ ಪ್ರತಿಭೆ ತೋರಿಸುವ ಕೆಲಸ ಮಾಡಬೇಕು. ಯುವಕರಿಗೆ ಸರಿಯಾದ ಕ್ರೀಡಾ ತರಬೇತಿ ಸಿಕ್ಕರೆ ಉತ್ತಮ ಕ್ರೀಡಾಪಟುಗಳಾಗಿ ರೂಪಗೊಳ್ಳುತ್ತಾರೆ. ಕ್ರೀಡೆಯಲ್ಲಿ ಭಾಗವಹಿಸಬೇಕಾದರೆ ಆಸಕ್ತಿ ಅತಿಮುಖ್ಯ, ತಾಲೂಕಿನಲ್ಲಿ ಕ್ರೀಡಾ ತರಬೇತಿ ಕೇಂದ್ರ ಹೆಚ್ಚು ಕ್ರೀಡಾಪಟುಗಳನ್ನು ಹೊರತರುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ ಪಿ.ರವಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯದಲ್ಲಿ ಹೆಚ್ಚು ಲಾಭ ಗಳಿಸಬಹುದು. ಕ್ರೀಡೆಯಲ್ಲಿ ಭಾಗವಹಿಸಿ ದೊಡ್ಡ ಸಾಧನೆ ಮಾಡಬಹುದು. ಗೆಲುವು–ಸೋಲು ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು,ಪಪಂ ಸದಸ್ಯ ಶ್ರೀನಿವಾಸ, ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ಮುಖಂಡರು ಎಸ್.ಮರಿದೇವಯ್ಯ, ಆದಿಕರ್ನಾಟಕ ಮಹಾಸಭಾ ಉಪಾಧ್ಯಕ್ಷ ಹಳಿಯೂರು ಚಿನ್ನಣ್ಣ, ಸೋಮಣ್ಣ, ಸರಗೂರು ಕೃಷ್ಣ, ವಾಲಿಬಾಲ್ ರಮೇಶ್, ಕಳಸೂರು ಬಸವರಾಜು, ಸೂರ್ಯ ಕುಮಾರ್, ಜಿಯಾರ ಸುರೇಶ್, ದೈಹಿಕ ಶಿಕ್ಷಣ ನಿರ್ದೇಶಕ ಪುಟ್ಟರಾಜು ಎಸ್.ಜೆ.ಅರಣ್ಯ ಸಂರಕ್ಷಣಾಧಿಕಾರಿ ಮಧು ದೇವಯ್ಯ, ಅಂತರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು ಡಾ.ಎಂ.ಡಿ.ನಾಗೇಂದ್ರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ ಸನೋಜ್, ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಅಧ್ಯಕ್ಷ ಎನ್.ಬೇಗೂರು ಮಹೇಶ್, ಗೌರವಾಧ್ಯಕ್ಷ ಕಳಸೂರು ಸೋಮೇಶ್, ಕಾರ್ಯದರ್ಶಿ ಮಗ್ಗೆ ರತ್ನಯ್ಯ ಉಪಾಧ್ಯಕ್ಷ ಸುನೀಲ್ ಕುಮಾರ್, ಖಜಾಂಚಿ ಅಪ್ಪು ಜಕ್ಕಹಳ್ಳಿ,ಲಿಂಗೇನಹಳ್ಳಿ ವಿಶ್ವಕಂಠ, ತಂಡದ ಮಾಲಿಕರು ಬಸವರಾಜು, ಭಾಸ್ಕರ್, ಜ್ಯೋತೀಶ್, ಮಣಿ, ಲೋಕೇಶ್, ಮಲ್ಲೇಶ್ ಎಲ್ಲಾ ತಂಡದ ಮಾಲಿಕರು ಸೇರಿದಂತೆ ಕ್ಲಬ್ ನ ಪದಾಧಿಕಾರಿಗಳು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


