nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    ಜಿಲ್ಲಾ ಸುದ್ದಿ January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    By adminJanuary 10, 2026No Comments2 Mins Read
    sargur

    ಸರಗೂರು:  ಮೊಬೈಲ್ ಮತ್ತು ಟಿವಿ ಮಾಧ್ಯಮದ ಪ್ರಭಾವದಿಂದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಬಳಗದವರು ಗ್ರಾಮೀಣ ಭಾಗದ ಊರ ಯುವಕರಿಗೆ ಪಂದ್ಯಾವಳಿಯನ್ನು ಆಯೋಜಿಸಿ ಅಭಿವೃದ್ಧಿ ಮತ್ತು ಸಂಬಂಧದ ಬೆಸುಗೆಗೆ ಮುನ್ನುಡಿ ಬರೆಯುತ್ತಿರುವುದು ಮಾದರಿಯಾಗಿದೆ ಎಂದು ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ ಹೇಳಿದರು.

    ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಮೊದಲನೇಯ ವರ್ಷ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್– 2026 ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ವಾಲಿಬಾಲ್‌ ಪಂದ್ಯಾವಳಿಯ ಅಂಬಾರಿ ಹೊತ್ತ ಅರ್ಜುನ ಆನೆ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ಹಾಗೂ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

    ಎಲ್ಲರಲ್ಲೂಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಇದನ್ನು ಆತ್ಮವಿಶ್ವಾಸ ಹಾಗೂ ಮನೋಬಲದಿಂದ ಪ್ರಯೋಗಕ್ಕೆ ಒಳಪಡಿಸಿ ಸಾಧನೆ ಮೆರೆಯುವಂತಾಗಬೇಕು ಎಂದರು.

    ಯುವಕರು ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ತೋರಿಸುವ ಕೆಲಸ ಮಾಡಬೇಕು. ದಿನನಿತ್ಯದ ಕೆಲಸಗಳಲ್ಲೇ ತೊಡಗಿಕೊಂಡರೆ ಆಸಕ್ತಿ ಕಳೆದುಕೊಳ್ಳುತ್ತಾರೆ. ರಜಾ ದಿನಗಳಲ್ಲಿ ಆಯೋಜಿಸುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲೇ ಅಡಗಿರುವ ಪ್ರತಿಭೆ ತೋರಿಸುವ ಕೆಲಸ ಮಾಡಬೇಕು. ಯುವಕರಿಗೆ ಸರಿಯಾದ ಕ್ರೀಡಾ ತರಬೇತಿ ಸಿಕ್ಕರೆ ಉತ್ತಮ ಕ್ರೀಡಾಪಟುಗಳಾಗಿ ರೂಪಗೊಳ್ಳುತ್ತಾರೆ. ಕ್ರೀಡೆಯಲ್ಲಿ ಭಾಗವಹಿಸಬೇಕಾದರೆ ಆಸಕ್ತಿ ಅತಿಮುಖ್ಯ,  ತಾಲೂಕಿನಲ್ಲಿ ಕ್ರೀಡಾ ತರಬೇತಿ ಕೇಂದ್ರ ಹೆಚ್ಚು ಕ್ರೀಡಾಪಟುಗಳನ್ನು ಹೊರತರುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

    ಜಿಪಂ ಮಾಜಿ ಸದಸ್ಯ ಪಿ.ರವಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯದಲ್ಲಿ ಹೆಚ್ಚು ಲಾಭ ಗಳಿಸಬಹುದು. ಕ್ರೀಡೆಯಲ್ಲಿ ಭಾಗವಹಿಸಿ ದೊಡ್ಡ ಸಾಧನೆ ಮಾಡಬಹುದು. ಗೆಲುವು–ಸೋಲು ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಅಧಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು,ಪಪಂ ಸದಸ್ಯ ಶ್ರೀನಿವಾಸ, ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ಮುಖಂಡರು ಎಸ್.ಮರಿದೇವಯ್ಯ, ಆದಿಕರ್ನಾಟಕ ಮಹಾಸಭಾ ಉಪಾಧ್ಯಕ್ಷ ಹಳಿಯೂರು ಚಿನ್ನಣ್ಣ, ಸೋಮಣ್ಣ, ಸರಗೂರು ಕೃಷ್ಣ, ವಾಲಿಬಾಲ್ ರಮೇಶ್, ಕಳಸೂರು ಬಸವರಾಜು, ಸೂರ್ಯ ಕುಮಾರ್, ಜಿಯಾರ ಸುರೇಶ್, ದೈಹಿಕ ಶಿಕ್ಷಣ ನಿರ್ದೇಶಕ ಪುಟ್ಟರಾಜು ಎಸ್.ಜೆ.ಅರಣ್ಯ ಸಂರಕ್ಷಣಾಧಿಕಾರಿ ಮಧು ದೇವಯ್ಯ, ಅಂತರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು ಡಾ.ಎಂ.ಡಿ.ನಾಗೇಂದ್ರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ ಸನೋಜ್, ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಅಧ್ಯಕ್ಷ ಎನ್.ಬೇಗೂರು ಮಹೇಶ್, ಗೌರವಾಧ್ಯಕ್ಷ ಕಳಸೂರು ಸೋಮೇಶ್, ಕಾರ್ಯದರ್ಶಿ ಮಗ್ಗೆ ರತ್ನಯ್ಯ ಉಪಾಧ್ಯಕ್ಷ ಸುನೀಲ್ ಕುಮಾರ್, ಖಜಾಂಚಿ ಅಪ್ಪು ಜಕ್ಕಹಳ್ಳಿ,ಲಿಂಗೇನಹಳ್ಳಿ ವಿಶ್ವಕಂಠ, ತಂಡದ ಮಾಲಿಕರು ಬಸವರಾಜು, ಭಾಸ್ಕರ್, ಜ್ಯೋತೀಶ್, ಮಣಿ, ಲೋಕೇಶ್, ಮಲ್ಲೇಶ್ ಎಲ್ಲಾ ತಂಡದ ಮಾಲಿಕರು ಸೇರಿದಂತೆ ಕ್ಲಬ್ ನ ಪದಾಧಿಕಾರಿಗಳು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.