ಸರಗೂರು: ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಒತ್ತಾಯಿಸಿದರು.
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಅನೀಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಅನೀಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಮಾಜಿ ಸಂಸದ ಹಾಗೂ ಕಾಯಕಲೋಗಿ ರಾಜ್ಯದ ಮೋದಲನೇ ಸಂಸದ ಎಂಬ ಹೆಗ್ಗಳಿಕೆ ಪಡೆದಿರುವ ದಿ.ಆರ್.ದ್ರುವನಾರಯಣ್ ರವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟ ಅಭಿಮಾನಿಯಾಗಿರುವ ಶಾಸಕ ಅನಿಲ್ ಚಿಕ್ಕಮಾದು ಚುನಾವಣೆಗಳಲ್ಲಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಜಯಪ್ರಕಾಶ್,ಕೃಷ್ಣನಾಯಕ ಸೇರಿದಂತೆ ಅನೇಕ ಘಟಾನುಘಟಿಗಳನ್ನು ಸೋಲಿಸಿದ್ದಾರೆ. ನಮ್ಮ ಹಳೆ ಮೈಸೂರು ಭಾಗದದಲ್ಲಿ ನಾಯಕ ಸಮಾಜದ ನಾಯಕರಿಗೆ ಯಾವುದೇ ಸಚಿವ ಸ್ಥಾನ ನೀಡಿಲ್ಲ.ಅವರಿಗೆ ಸಚಿವ ಸ್ಥಾನ ನೀಡಿ ಯಾವುದೇ ಭಾಗದ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದರು.
ಬೆಳಗ್ಗೆ 7 ಗಂಟೆಗೆ ಮೈಸೂರಿನ ಗೃಹ ನಿವಾಸದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಪರಿಹರಿಸಿ ನಂತರ ಕ್ಷೇತ್ರ ಬರುವ ಶಾಸಕರು ಕ್ಷೇತ್ರದ ವಿವಿಧೆಡೆ ಸಂಚರಿಸಿ ಕೆಲಸ ಕಾರ್ಯ ಮುಗಿಸಿ ನಂತರ ಮನೆಗೆ ತೆರಳುತ್ತಾರೆ. ನಾಯಕ ಸಮಾಜದ ವರ್ಗದ ನೇತಾರರಾಗಿರುವ ಅನೀಲ್ ಚಿಕ್ಕಮಾದು ಅವರು ಶಾಸಕರಾಗಿದ್ದು, 24*7 ಕೆಲಸ ಮಾಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


