ಸರಗೂರು: ಎಚ್.ಡಿ.ಕೋಟೆ ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಹಾಗೂ ಸೇರಿದಂತೆ ಅನೇಕ ಸದಸ್ಯರು ಒತ್ತಾಯ ಮಾಡಿದರು.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಅನಿಲ್ ಕುಮಾರ್ ಅವರು ಎರಡು ಬಾರಿ ಶಾಸಕರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಅವರ ತಂದೆ ದಿವಂಗತ ಎಸ್.ಚಿಕ್ಕಮಾದು ಅವರು ತಾಲೂಕಿನಲ್ಲಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ, ಹಾಗಾಗಿ ತಂದೆಯ ಹಾದಿಯಲ್ಲಿ ಮಗ ನಡೆಯುತ್ತಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ ಎಂದರು.
ರಾಜ್ಯದ ಗಡಿ ಭಾಗದಲ್ಲಿ ಇರುವ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿರುವ ಅನಿಲ್ ಚಿಕ್ಕಮಾದು ಅವರಿಗೆ ಒಂದೇ ಪಕ್ಷದಲ್ಲಿ ಬಾರಿ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸದಲ್ಲೇ ಇಲ್ಲ. ಅದನ್ನು ನಮ್ಮ ಶಾಸಕರು ಮಾಡಿ ತೋರಿಸಿದ್ದಾರೆ. ಸುಮಾರು ಸಚಿವ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ಆದರಿಂದ ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದರು.
ನಮ್ಮ ರಾಜಕೀಯ ಗುರುಗಳಾದ ಆರ್.ಧ್ರುವನಾರಾಯಣ್ ಹಾಗೂ ಚಿಕ್ಕಮಾದು ರವರ ನೇತೃತ್ವದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ’ ನಮ್ಮ ಜಿಲ್ಲಾವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಸ್.ಸಿ.ಮಹದೇವಪ್ಪ ಜೊತೆಗೂಡಿ ತಾಲೂಕಿನ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರಿಂದ ತಾಲೂಕಿನ ಜನತೆಯ ಆಸೆಯಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


