ಸರಗೂರು: ಇಂದಿನ ಮಕ್ಕಳು ಬರೀ ಪಠ್ಯ ವಾಚನ ಮಾಡಿದರೆ ಸಾಲದು ಆಟೋಟ, ಪ್ರದರ್ಶನ, ಮನರಂಜನೆ ಕೂಡ ಮುಖ್ಯ ಎಂದು ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಂಜುಂಪಾಷ ಎಂದರು.
ತಾಲೂಕಿನ ಪಟ್ಟಣದ ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 — 25 ನೇ ಸಾಲಿನ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಶುಕ್ರವಾರದಂದು ಏರ್ಪಡಿಸಲಾಗಿತ್ತು. ಸುತ್ತೂರು ಸ್ವಾಮೀಜಿಗಳ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮದ ಉದ್ಘಾಟಿಸಿ ನಂತರ ಮಾತನಾಡಿದರು.
ಇಂದಿನ ಪೀಳಿಗೆಗೆ ಇಂತಹ ವಸ್ತು ಪ್ರದರ್ಶನಗಳು ಆಗಿಂದಾಗ್ಗೆ ಏರ್ಪಡಿಸುತ್ತಾ ಬಂದರೆ, ವಿದ್ಯಾರ್ಥಿಗಳಲ್ಲಿ ಅತ್ಯುತ್ಸಾಹ ಉಂಟಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದರು.
ವಸ್ತು ಪ್ರದರ್ಶನಗಳು ಸೀಮಿತ ಅವಧಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿ ಸೀಮಿತಾವಧಿಗೆ ಮುಕ್ತಾಯವಾಗುತ್ತದೆ. ಆದರೆ ತಾತ್ಕಾಲಿಕವಾಗಿ ಏರ್ಪಾಡು ಮಾಡುವ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಪಡೆಯುವ ಜ್ಞಾನ ಶಾಶ್ವತವಾಗಿ ವಿದ್ಯಾರ್ಥಿಗಳ ಮನದಲ್ಲಿ ಉಳಿದುಕೊಳ್ಳುತ್ತದೆ ಎಂದರು.
ಪ್ರಾಂಶುಪಾಲರು ಕೆ.ಎಸ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಹಾಗೂ ವೈಜ್ಞಾನಿಕವಾಗಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗುತ್ತದೆ. ಇದರಿಂದ ಜ್ಞಾನ ಲಭಿಸುತ್ತದೆ ಎಂದರು
ಜೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ಮಹದೇವಸ್ವಾಮಿ ಮಾತನಾಡಿ, ಇಂತಹ ಶೈಕ್ಷಣಿಕ ವಸ್ತು ಪ್ರದರ್ಶನಗಳನ್ನು ಏರ್ಪಾಡು ಮಾಡುವುದರಿಂದ, ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ, ಜ್ಞಾನ ಸಂಪಾದನೆಯ ದೃಷ್ಟಿಯಿಂದ, ಸರ್ವ ರೀತಿಯಲ್ಲೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ಇದರಿಂದ ಶೈಕ್ಷಣಿಕವಾಗಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಮೂರ್ತಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅತ್ಯುತ್ತಮವಾದ ಮಾದರಿಗಳಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಜಯಲಕ್ಷ್ಮಿ, ನಂದಿನಿ ಎಸ್, ನಂದಿನಿ ಎಂ.ಎಸ್, ಶಿಲಾ, ಶೋಭಾ ರಾಣಿ, ಅಂತೋನಿ ಮೇರಿ, ಶಿಲ್ಪ,ರಂಜೀನಿ ಆರಸ್,ಜಯಣ್ಣ, ಮಂಜುನಾಥ, ಕೃಷ್ಣಮೂರ್ತಿ, ಇನ್ನೂ ಶಿಕ್ಷಕರು ಹಾಗೂ ಪೋಷಕರು ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx