ಸರಗೂರು: ತಾಲ್ಲೂಕಿನ ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಪಾಟೀಲ್ ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಗುರುವಾರ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಸಂಘದ ನೂತನ ಪದಾಧಿಕಾರಿಗಳ ವಿವರ:
ಗೌರವಾಧ್ಯಕ್ಷರು: ಗೋಪಾಲಕೃಷ್ಣ
ಅಧ್ಯಕ್ಷರು: ರಾಜೇಶ್
ಉಪಾಧ್ಯಕ್ಷರು: ಪಾಟೀಲ್
ಕಾರ್ಯದರ್ಶಿ: ಮಹೇಶ್
ಖಜಾಂಚಿ: ಶ್ರೀಕಾಂತ್ ನಿಂಗಪ್ಪ
ನಿರ್ದೇಶಕರು: ಲೋಕೇಶ್, ಕುಮಾರ್, ಮಿಥುನ್, ಪ್ರಕಾಶ್, ನಾಗೇಶ್ ಹಾಗೂ ರವಿನಂದನ
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ ಮಾತನಾಡಿ, ಸಂಘದ ಸದಸ್ಯರ ಎಲ್ಲ ರೀತಿಯ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದರು. ವಾಹನ ಚಾಲಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಚಾಲಕರಿಗೆ ಎದುರಾಗುವ ಕಷ್ಟ-ಕಾರ್ಪಣ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು, ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
