nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    ಜಿಲ್ಲಾ ಸುದ್ದಿ June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    By adminJune 1, 2026No Comments2 Mins Read

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು ಮಹದೇವಸ್ವಾಮಿ (ಗುಣ) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

    ಪಟ್ಟಣದ ಎವಿಎಸ್ಎಸ್ ಕಚೇರಿಯಲ್ಲಿ ಶನಿವಾರ ನಡೆದ ಸಂಘಟನೆಯ ಮಹತ್ವದ ಸಭೆಯಲ್ಲಿ ಈ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಸಂಘದ ಅಧಿಕೃತ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.


    Provided by
    Provided by

    ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ರಾಜ್ಯ ಯುವ ಘಟಕದ ಅಧ್ಯಕ್ಷ ನಂದಾ ಅವರು, “ಎಸ್‌ಸಿ, ಎಸ್‌ಟಿ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಾಗಿ ಸಂಘಟನೆ ನಿರಂತರವಾಗಿ ಶ್ರಮಿಸಬೇಕಿದೆ. ಯುವಪೀಳಿಗೆಯಲ್ಲಿ ಸಂಘಟನಾತ್ಮಕ ಶಕ್ತಿಯನ್ನು ವೃದ್ಧಿಸಲು ನೂತನ ಪದಾಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು” ಎಂದು ಕರೆ ನೀಡಿದರು.

    ಬಳಿಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್ ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ರಾಜಕಾರಣಿಗಳು, ದಲಿತರ ಮೇಲೆ ದೌರ್ಜನ್ಯವಾದಾಗ ಅಥವಾ ಅವರ ಹಕ್ಕುಗಳನ್ನು ಕಿತ್ತುಕೊಂಡಾಗ ನೆರವಿಗೆ ಬಾರದ ಪರಿಸ್ಥಿತಿ ಇದೆ. ಇಂತಹ ಸಂದರ್ಭಗಳಲ್ಲೇ ದಲಿತ ಸಂಘರ್ಷ ಸಮಿತಿಗಳು ಹುಟ್ಟಿಕೊಂಡಿವೆ. ತಾಲ್ಲೂಕಿನ ಸಮಾಜದ ಬಂಧುಗಳಿಗೆ ಯಾವುದೇ ಅನ್ಯಾಯ ಉಂಟಾದರೂ ನೂತನ ಪದಾಧಿಕಾರಿಗಳು ಅವರ ಬೆನ್ನೆಲುಬಾಗಿ ನಿಂತು ನ್ಯಾಯ ಒದಗಿಸಿಕೊಡಬೇಕು” ಎಂದರು.

    ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಳಿಯೂರು ಮೂರ್ತಿ ಮಾತನಾಡಿ, “ಸಮುದಾಯ ನನ್ನ ಮೇಲೆ ಇಟ್ಟಿರುವ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸುತ್ತೇನೆ. ಹಿರಿಯರ ಮಾರ್ಗದರ್ಶನ ಹಾಗೂ ಯುವಕರ ಸಲಹೆಗಳನ್ನು ಪಡೆದುಕೊಂಡು ಸಮಾಜದಲ್ಲಿ ಸಮುದಾಯದ ಗೌರವವನ್ನು ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ” ಎಂದು ಭರವಸೆ ನೀಡಿದರು.

    ತಾಲ್ಲೂಕು ಉಪಾಧ್ಯಕ್ಷರಾಗಿ ಚಂದ್ರ, ಖಜಾಂಚಿಯಾಗಿ ಮನುಗನಹಳ್ಳಿ ಪ್ರಭು ಹಾಗೂ ಎಚ್.ಡಿ. ಕೋಟೆ ತಾಲ್ಲೂಕು ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ಅಧ್ಯಕ್ಷರಾಗಿ ಜಯಚಂದ್ರ ಅವರು ಆಯ್ಕೆಯಾಗಿದ್ದಾರೆ.

    ಈ ಸಂದರ್ಭದಲ್ಲಿ ರಾಜ್ಯ ಯುವ ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ರಾಷ್ಟ್ರೀಯ ಭೀಮಾ ಮಾರ್ಗ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾದನೂರು ಮಹದೇವಸ್ವಾಮಿ, ಪ್ರಮುಖರಾದ ರವಿಕುಮಾರ್, ಯಶವಂತಪುರ ಇಂದ್ರ ಸೇರಿದಂತೆ ಸಂಘಟನೆಯ ಹಿರಿಯ ಹಾಗೂ ಯುವ ಮುಖಂಡರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.