nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ಕಾಡಂಚಿನ ಗ್ರಾಮದ  ಜನರಿಗೆ ಆರೋಗ್ಯ ಶಿಬಿರ ಪ್ರಶಂಸನೀಯ: ಡಾ.ಟಿ.ರವಿಕುಮಾರ್
    ಜಿಲ್ಲಾ ಸುದ್ದಿ September 26, 2025

    ಸರಗೂರು | ಕಾಡಂಚಿನ ಗ್ರಾಮದ  ಜನರಿಗೆ ಆರೋಗ್ಯ ಶಿಬಿರ ಪ್ರಶಂಸನೀಯ: ಡಾ.ಟಿ.ರವಿಕುಮಾರ್

    By adminSeptember 26, 2025No Comments2 Mins Read
    arogya shivira sargur

    ಸರಗೂರು:  ಕಾಡಂಚಿನ ಗ್ರಾಮದ  ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ  ಪ್ರಶಂಸನೀಯ ಹಾಗೂ  ತುಂಬಾ ಸಂತೋಷಕರ ವಿಷಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.

    ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ನೇಮ್ಮನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐ.ಸಿ.ಟಿ.ಸಿ.ವಿಭಾಗ ಹೆಚ್.ಡಿ.ಕೋಟೆ ಇವರ ವತಿಯಿಂದ, ಬಿ.ಮಟಕೆರೆ  ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ನೆಮ್ಮನ ಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ನೆಮ್ಮನ ಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಹಾಗೂ ನಾವು ಇಂದು 2ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಐಸಿಟಿಸಿ ರಕ್ತ ಪರೀಕ್ಷೆ, ಕಫ ಪರೀಕ್ಷೆ  ಬಗ್ಗೆ ತಪಾಸಣೆ  ಮಾಡಲಾಗುತ್ತದೆ.

    ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು ಯಶಸ್ವಿಗೊಳಿಸಿ ಎಂದು ತಿಳಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕ್ಯಾನರ್ ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸುತ್ತೇವೆ ಎಂದರು.

    ನಂತರ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರ ಶೇಖರ್ ಮಾತನಾಡಿ, ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದ ನೆಮ್ಮನ ಹಳ್ಳಿ ಗ್ರಾಮದಲ್ಲಿ ಈ ಶಿಬಿರವನ್ನು  ಮಾಡಲು ತಿಳಿಸಿದ್ದೇವೆ ಕಾರಣ ನೇಮ್ಮನ ಹಳ್ಳಿ ಗ್ರಾಮದ ಜನರಿಗೆ ಒಳ್ಳೆಯ ಆರೋಗ್ಯವನ್ನು ಒದಗಿಸುವುದು ಮತ್ತು ಜನರಿಗೆ ಆರೋಗ್ಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಗ್ರಾಮವನ್ನು ಆಯ್ಕೆ ಮಾಡಲಾಗಿದೆ, ಆದುದರಿಂದ ಗ್ರಾಮದ ಹೆಚ್ಚಿನ ಜನರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

    ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೇವದಾಸ್ ರವರು ಮಾತನಾಡಿ,  ಆರೋಗ್ಯವೇ ಭಾಗ್ಯ, ಎಲ್ಲರೂ ಆರೋಗ್ಯವಾಗಿರಿ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ನಮ್ಮ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿರುವುದು ತುಂಬಾ ಸಂತೋಷಕರ ವಿಷಯ, ಆದರೆ  ಶಿಬಿರಕ್ಕೆ ಹೆಚ್ಚಿನ ಜನರು ಬಂದು ಚಿತ್ರವನ್ನು ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು.

    ಐಸಿಟಿಸಿ ಆಪ್ತ ಸಮಾಲೋಚಕ ರಾಮು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ  ನುಡಿಯನ್ನು ನುಡಿದರು. ಈ ಶಿಬಿರದಲ್ಲಿ ಬಿಪಿ ಶುಗರ್ 80 ತಪಾಸಣೆ , 40 ಜನ ಕಣ್ಣಿನ ಪರೀಕ್ಷೆ, 60ಜನ  ಐಸಿಟಿಸಿ  ಪರೀಕ್ಷೆ,  ಈ  ಶಿಬಿರದಲ್ಲಿ ಪ್ರಯೋಜನವನ್ನು  ಪಡೆದಿರುತ್ತಾರೆ.

    ಈ ಕಾರ್ಯಕ್ರಮದಲ್ಲಿ ದಂತ ತಜ್ಞ ಡಾ.ಪೂರ್ಣಿಮಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ ಭಾಗ್ಯಮ್ಮ, ಪಂಚಾಯಿತಿ ಸದಸ್ಯರು ನಾಗೇಂದ್ರ, ನಾಗನಾಯ್ಕ, ಬೊಮ್ಮ,  ಪಿಬಿಎಸ್ಕೆ ವೈದ್ಯಾಧಿಕಾರಿ ಡಾ.ಹೇಮಲತಾ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಶರಣಪ್ಪ, ರವಿರಾಜ್, ನಾಗರಾಜು, ಉಮೇಶ್, ಮಹೇಶ್, ಲೋಲಕ್ಷಿ, ಮಹದೇವ್ ಜಲಜ, ಜಯಲಕ್ಷ್ಮಿ, ಗಿರೀಶ್,  ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.