ಸರಗೂರು: ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ. ಅದು ಕುಡಿಯಲು ಯೋಗ್ಯವಿಲ್ಲದ ನೀರು, ಮನುಷ್ಯರಿಗೂ ಪ್ರಾಣಿಗಳಿಗೂ ವ್ಯತ್ಯಾಸ ಇಲ್ಲವೇ ಎಂಬುದನ್ನು ಜಯಲಕ್ಷೀಪುರ ಗ್ರಾಮಸ್ಥರು ಜೆಜೆಎಂ ಅಧಿಕಾರಿಗಳು ಹಾಗೂ ಗುತ್ತಿಗೆದಾರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ತಾಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮಸ್ಥರ ನೊಂದ ಮಾತುಗಳು. ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಗ್ರಾಮಸ್ಥರು ಕಲುಷಿತ ನೀರನ್ನೇ ಬಳಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಸುಮಾರು 60 ಕುಟುಂಬಗಳ ಹೆಚ್ಚು ವಾಸ ಮಾಡುತ್ತಿವೆ. ಬೋವಿ ಜನಾಂಗದ ಸಮುದಾಯದವರೂ ಇಲ್ಲಿ ನೆಲೆಸಿದ್ದಾರೆ. ಹೆಚ್ಚಿನವರು ಕೂಲಿ ಕಾರ್ಮಿಕರಾಗಿದ್ದಾರೆ. ‘ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋದರೆ, ಬರುವುದು ಸಂಜೆ. ಬೆಳಿಗ್ಗೆ ಮತ್ತು ಸಂಜೆ ಕುಡಿಯುವ ನೀರನ್ನು ಸಂಗ್ರಹಿಸುವುದೇ ಸಮಸ್ಯೆಯಾಗಿದ್ದು, ಅಕ್ಕ ಪಕ್ಕದ ಹೊಲಗದ್ದೆಗಳಲ್ಲಿ ಕೃಷಿ ನೀರು ಹಾಯಿಸುವವರನ್ನು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಸ್ಥಳೀಯರು ನೋವು ತೋಡಿಕೊಂಡರು.
ಗ್ರಾಮದ ಮುಖಂಡ ವೆಂಕಟರಾಮು ಮಾತನಾಡಿ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಸರ್ಕಾರದ ಅನುದಾನ ವತಿಯಿಂದ ಕಳೆದ ಒಂದು ವರ್ಷದಿಂದ ಜೆಜೆಎಂ ಹೆಸರಿನಲ್ಲಿ ಕಾಮಗಾರಿ ನಿರ್ಮಾಣ ಮಾಡಲಾಗಿದ್ದು.ಅದರೆ ಅವರ ಕಾಮಗಾರಿ ಕಳಪೆ ಕಾಮಗಾರಿ ಮಾಡಿ ಒಂದು ವರ್ಷದಿಂದಲೂ ಗ್ರಾಮದಲ್ಲಿ ಪ್ರತಿ ಮನೆಗೂ ನಲ್ಲಿ ವ್ಯವಸ್ಥೆ ಮಾಡಿ ಒಂದು ದಿನವೂ ನಲ್ಲಿ ಮೂಲಕ ಮನೆಗಳಿಗೆ ನೀರು ಕೊಡುವ ಕೆಲಸ ಮಾಡಿಲ್ಲ.ಯಾಕಂದರೆ ಸರಿಯಾದ ರೀತಿಯಲ್ಲಿ ಪೈಪ್ ಲೈನ್ ಕೆಲಸ ಮಾಡಿಲ್ಲ.ನಾವುಗಳು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ನಮ್ಮ ಗ್ರಾಮದಲ್ಲಿ ನೀರಿನ ವ್ಯವಸ್ಥೆ ಜೆಜೆಎಂ ಹೆಸರಿನಲ್ಲಿ ಗುತ್ತಿಗೆದಾರ ಮನೆ ಮನೆಗೆ ನೀರು ನೀಡುವ ಕೆಲಸ ಮಾಡಿಲ್ಲ ಎಂದು ಹೇಳಿದರು.ಅವರು ಕೂಡ ಇದರ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದಾರೆ ಎಂದು ಆರೋಪಿಸಿದರು.
ಗ್ರಾಮದ ಮಹಿಳೆಯರು ಹಾಗೂ ಮುಖಂಡರು ಪಂಚಾಯಿತಿಗೆ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರ ಗಮನಕ್ಕೆ ತಂದ ಕೂಡಲೇ ಕಳೆದ ತಿಂಗಳಿಂದ ಪಂಚಾಯಿತಿಯಿಂದ ಟ್ಯಾಂಕ್ ಮೂಲಕ ನೀರನ್ನು ತಂದು ನಿಲ್ಲಿಸುತ್ತಿದ್ದಾರೆ. ಅದು ಕುಡಿಯುವ ಸ್ಥಿತಿಯಲ್ಲಿಲ್ಲ. ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇಲ್ಲವೇ’ ಎಂದು ದೂರಿದರು.
ಕುಡಿಯುವ ನೀರಿನ ಸಮಸ್ಯೆಯಿರುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆಯಿಂದ ಮನೆಗೆ ಬಾಣಂತಿ ಮತ್ತು ಮಕ್ಕಳನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂಬುದು ಗ್ರಾಮಸ್ಥರ ದೂರು.
‘ಗ್ರಾಮದ ಮುಖಂಡರ ಸೇರಿದಂತೆ ಹಲವರ ಹೊಲದಿಂದ ಕೊಳವೆಬಾವಿ ನೀರನ್ನು ಪಡೆಯುತ್ತಿದ್ದೇವೆ. ಅದರೆ, ಬೇಸಿಗೆ ಕಾಲವಾಗಿರುವುದರಿಂದ ಅವರಿಗೂ ನೀರಿನ ಸಮಸ್ಯೆ ಇದೆ. ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ’ ಎಂದು ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


