nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026
    Facebook Twitter Instagram
    ಟ್ರೆಂಡಿಂಗ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    By adminMarch 21, 2026No Comments2 Mins Read

    ಸರಗೂರು: “ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯಕ. ಮಾನವೀಯತೆಯಿಂದ ಪರಸ್ಪರ ಪ್ರೀತಿ ಮತ್ತು ವಿಶ್ವಾಸದಿಂದ ಬಾಳುವುದು ಮುಖ್ಯ,” ಎಂದು ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣದ ಖಾದ್ರಿಯಾದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದ ನಂತರ ಅವರು ಮಾತನಾಡಿದರು.

    ಸಾದಿ ಮಹಲ್ ನಿರ್ಮಾಣದ ಭರವಸೆ:

    ಸರಗೂರು ಪಟ್ಟಣದಲ್ಲಿ ಸಾದಿ ಮಹಲ್ ಭವನ ನಿರ್ಮಾಣ ಮಾಡಿಕೊಡಬೇಕೆಂದು ಮುಸ್ಲಿಂ ಬಾಂಧವರು ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, “ಹೆಚ್.ಡಿ. ಕೋಟೆ ತಾಲ್ಲೂಕಿನಲ್ಲಿ ಈಗಾಗಲೇ ಸಾದಿ ಮಹಲ್ ಇದೆ. ಅದೇ ಮಾದರಿಯಲ್ಲಿ ಸರಗೂರು ಪಟ್ಟಣದಲ್ಲೂ ಸಾದಿ ಮಹಲ್ ನಿರ್ಮಾಣಕ್ಕೆ ಜಾಗ ಗುರುತಿಸಿ, ಕಾಂಗ್ರೆಸ್ ಸರ್ಕಾರದ ವತಿಯಿಂದ ಖಂಡಿತವಾಗಿಯೂ ಭವನ ನಿರ್ಮಿಸಿಕೊಡಲಾಗುವುದು,” ಎಂದು ಭರವಸೆ ನೀಡಿದರು.

    ಅಲ್ಲದೆ, ಖಾದ್ರಿಯ ಸುತ್ತ ಕಾಂಪೌಂಡ್ ನಿರ್ಮಾಣದ ಬೇಡಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಾಗದ ದಾಖಲೆಗಳನ್ನು ಪರಿಶೀಲಿಸಿದ ನಂತರ ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪೂರೈಸುವುದಾಗಿ ತಿಳಿಸಿದರು.

    ವಿವಿಧತೆಯಲ್ಲಿ ಏಕತೆ ನಮ್ಮ ಮಂತ್ರ:

    “ಭಾರತ ದೇಶವು ವಿವಿಧ ಜಾತಿ ಮತ್ತು ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ; ಬದಲಾಗಿ ಪ್ರೀತಿಯನ್ನೇ ಕಲಿಸುತ್ತವೆ. ಇದನ್ನು ಅರಿತು ನಡೆದರೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ,” ಎಂದು ಅವರು ಆಶಯ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಸರಗೂರು ಮುಸ್ಲಿಂ ಸಮಾಜದ ಜಾಮಿಯಾ ಮಸೀದಿ ಗುರುಗಳು ಅಬ್ದುಲ್ ರಷೀದ್,  ಯಜಮಾನರಾದ ಇದಾಯತ್  ಉಲ್ಲಾ ಷರೀಫ್, ಮಜೀದ ನೂರ್  ಅಬ್ದುಲ್ ಜಲೀಲ್, ಅಮೀರ್ ಸುಹೇಲ್, ಅನಸ್, ಯೂನೂಸ್, ಜಲೀಲ್, ಜಾವೀದ್, ಸುಭಾನ್, ಇಬ್ರಾಹಿಂ, ಅಬ್ದುಲ್ ವಾಜಿದ್, ಮಪ್ತಿರುಲ್ಲಾ, ಯಾಸೀನ್, ಬಾಷಾ, ಮಹಮದ್ ಅಲಿ, ಮುಖಂಡರು. ಪಪಂ ಸದಸ್ಯ ಶ್ರೀನಿವಾಸ,ಮಾ ಜಿಪಂ ಸದಸ್ಯ ಪಿ.ರವಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಟೌನ್ ಅಧ್ಯಕ್ಷ ಎಸ್ ಎನ್ ನಾಗರಾಜು, ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಮುಖಂಡರಾದ ಆರ್ಯ ಮಹೇಶ್, ಶಿವನಂಜು, ಹಾಜರಿದ್ದರು‌.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬರಗೂರು: ಬುಡಕಟ್ಟಿಗೆ ಸೇರಿರುವ ಕಾಡುಗೊಲ್ಲರು ತಮ್ಮ ಕುಲದಲ್ಲಿ ಜನಿಸಿ ಬಹುದೊಡ್ಡ ಜನಪದ ಬದುಕನ್ನು ಬದುಕಿ, ಜೀವಪರವಾಗಿದ್ದ ಸಾಂಸ್ಕೃತಿಕ ವೀರಗಾರರನ್ನು ಕುಲದೈವಗಳೆಂದು…

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.