ಸರಗೂರು: ಡಾ. ಅಂಬೇಡ್ಕರ್ ಅವರು ಶಿಕ್ಷಣ ಬಹಳ ಮುಖ್ಯ ಎಂದು ನಂಬಿದ್ದರು. ಕಷ್ಟಪಟ್ಟರೂ ಸಾಕಷ್ಟು ಅಧ್ಯಯನ ಮಾಡಿ ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಸೇರಿದಂತೆ ಹಲವು ಪದವಿಗಳನ್ನು ಪಡೆದರು. ಅವರ ಜ್ಞಾನ ಮತ್ತು ನಿರ್ಣಯದಿಂದ, ಅವರು ಅನ್ಯಾಯದ ಚಿಕಿತ್ಸೆ ಮತ್ತು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹೋರಾಡಿದರು ಎಂದು ದಸಂಸ (ಅಂಬೇಡ್ಕರ್ ವಾದ) ತಾಲ್ಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಕಿವಿ ಮಾತು ಹೇಳಿದರು.
ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದಲ್ಲಿ ಭಾನುವಾರ ರಂದು, ಅಂಬೇಡ್ಕರ್ ಅವರ 133 ನೇ ಜಯಂತಿ ಅಂಗವಾಗಿ, ದಸಂಸ ಅಂಬೇಡ್ಕರ್ ವಾದ ಸಂಘಟನೆ ಸಹಕಾರದೊಂದಿಗೆ, ವಿಶ್ವ ಜ್ಞಾನಿ ಜ್ಞಾನ ಮಂದಿರ ಗ್ರಂಥಾಲಯವನ್ನು ಉದ್ಘಾಟನೆ ಮಾಡಿ ಹಾಗೂ ಅಂಬೇಡ್ಕರ್ ರವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
“ಡಾ. ಅಂಬೇಡ್ಕರ್ ಅವರು ಒಂದು ದೊಡ್ಡ ಭಾರತದ ಸಂವಿಧಾನವನ್ನು ಬರೆದು, ಅವರು ಯಾರೇ ಆಗಿರಲಿ, ವಿಶ್ವದಲ್ಲಿ ಎಲ್ಲರಿಗೂ ಹಕ್ಕುಗಳನ್ನು ನೀಡುವ ಈ ಮಹತ್ವದ ದಾಖಲೆಯನ್ನು ಮಾಡಿದರು.
ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್. ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ಹಿಂದಿನ ದಿನಗಳಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ದಲಿತ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದರು” ಎಂದು ತಿಳಿಸಿದರು.
ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕೀಲ ಕಂದೇಗಾಲ ಶಿವರಾಜು ಮಾತನಾಡಿ, ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು ಎಂದರು.
ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಭಾರತ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು ನಿರ್ಮಿಸಲು ನೀಡಿದ ಕೊಡುಗೆ ಅಪಾರವಾಗಿದೆ. ದೇಶಕ್ಕೆ ಅವರ ಕೊಡುಗೆ ಮತ್ತು ಸೇವೆಯನ್ನು ಗೌರವಿಸಲು, ಅವರ ಜನ್ಮದಿನವನ್ನು ಪ್ರತಿ ವರ್ಷ ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಹಾಗೂ ನಮ್ಮ ಗ್ರಾಮದ ಮಕ್ಕಳು, ಯುವಕರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯವನ್ನು ಉಪಯೋಗಿಸಿಕೊಂಡು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ರುದ್ರಯ್ಯ, ಬಸವಯ್ಯ, ಮುಖಂಡರು ಮರಿದಾಸಯ್ಯ, ವಿಶ್ವಕರ್ಮ ಸಮಾಜದ ಯಜಮಾನರು ನಾಗಚಾರಿ,ಬೆಳಗಿರಯ್ಯ, ದೊಡ್ಡಯ್ಯ, ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜು, ದಸಂಸ (ಅಂಬೇಡ್ಕರ್ ವಾದ) ಸಂಘಟನೆ ಕಾರ್ಯಕರ್ತರು ಚಂದ್ರ,ಅಣ್ಣಯ್ಯ ಸ್ವಾಮಿ, ನಾಗೇಂದ್ರ ಮೊಳೆಯೂರು ಕಾವಲ್, ಮಣಿಕಂಠ, ಕುಮಾರ್ ,ಕೆಂಪರಾಜು,ಮುತ್ತಿಗೆಹುಂಡಿ ಸರ್ಕಲ್, ಶಿವಲಿಂಗ ಕೂಡಗಿ, ಇನ್ನೂ ಗ್ರಾಮದ ಮುಖಂಡರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296