ಸರಗೂರು: ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ 84 ನೇ ವರ್ಷದ ಹುಟ್ಟು ಹಬ್ಬವನ್ನು, ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು, ವೈಯಕ್ತಿಕ ಜೀವನ ಮತ್ತು ರಾಜಕೀಯ ಬದುಕಿನಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಲ್ಲೇ ಅತ್ಯಂತ ಹಿರಿಯರು ಎನಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜುಲೈ 21 ಸೋಮವಾರ 83 ವಸಂತಗಳನ್ನು ಪೂರೈಸಿ 84 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ರಾಜಕೀಯ ಬದುಕಿನಲ್ಲಿ 50 ವರ್ಷಗಳ ಸುದೀರ್ಘ ಹಾದಿ ಕ್ರಮಿಸಿ, ಐದು ದಶಕಗಳ ಸಾರ್ವಜನಿಕ ಬದುಕು ಪೂರೈಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ ಎಂದರು.
ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, 5 ದಶಕಗಳ ಪಕ್ಷ ನಿಷ್ಠೆಯ ಖರ್ಗೆ ಅವರ ರಾಜ್ಯ ಕಾಂಗ್ರೆಸ್ ನ ನಡುವೆಯೇ, ಖರ್ಗೆ ಅವರು ಸ್ವತಃ ತಮ್ಮ ರಾಜಕೀಯ ಜೀವನವನ್ನೇ ಕಾಂಗ್ರೆಸ್ ಪಕ್ಷದಲ್ಲಿ ಐತಿಹಾಸಿಕ ಹಾದಿ ಬರೆಯಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಪಸಂಖ್ಯಾತ ಸಮಿತಿ ಸದಸ್ಯ ಮಕ್ ಫಿರುಲ್ಲಾ, ಸುಭಾನ್, ಇಬ್ರಾಹಿಮ್, ಮಾದಶಟ್ಟಿ, ವಾಜೀದ್, ಮಹೇಶ್, ಆಟೋ ರಮೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC