nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    ಜಿಲ್ಲಾ ಸುದ್ದಿ August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    By Ganesh TumkuruAugust 7, 2026No Comments1 Min Read
    sargur

    ಸರಗೂರು: ಸಾಮಾಜಿಕ ಸೇವೆ ಹಾಗೂ ವೃತ್ತಿಪರ ಸಾಧನೆಗಳ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಜಂಗಲ್ ಲಾಡ್ಜ್ ಬಂಡೀಪುರದ ಮ್ಯಾನೇಜರ್ ಪ್ರಸನ್ನ ಕುಮಾರ್ ಅವರನ್ನು ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ‘ಪಟ್ಟಣದ ಸ್ನೇಹಿತರು’ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

    ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಈ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

    ಸನ್ಮಾನ ನೆರವೇರಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಅವರು, “ಪ್ರಸನ್ನ ಕುಮಾರ್ ಅವರು ತಮ್ಮ ನಿರಂತರ ಸೇವಾ ಮನೋಭಾವ, ಸಮಾಜಮುಖಿ ಕಾರ್ಯಗಳು ಹಾಗೂ ಸಾಧನೆಗಳ ಮೂಲಕ ಇಡೀ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವರಿಗೆ ಲಭಿಸಿರುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಗೌರವವು ನಮ್ಮೆಲ್ಲರಿಗೂ ಅತ್ಯಂತ ಸಂತಸ ತಂದಿದೆ” ಎಂದರು.

    ಮುಂದುವರಿದು ಮಾತನಾಡಿದ ಅವರು, “ಪ್ರಸನ್ನ ಕುಮಾರ್ ಅವರು ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಿರಂತರವಾಗಿ ನೆರವು ನೀಡುತ್ತಾ ಬಂದಿದ್ದು, ಅವರ ಈ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಬೆಟ್ಟದ ತಾಯಿ ಚಿಕ್ಕದೇವಮ್ಮ ಹಾಗೂ ಸಾಗರೆ ಮಾರಮ್ಮ ದೇವಿಯವರು ಅವರಿಗೆ ಆಯುಷ್ಯ, ಆರೋಗ್ಯ, ಸುಖ–ಶಾಂತಿ ನೀಡಿ ಕಾಪಾಡಲಿ. ಮುಂದೆಯೂ ಅವರು ಇಂತಹ ಉನ್ನತ ಸಾಧನೆಗಳನ್ನು ಮಾಡುತ್ತಾ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲಿ” ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಪಟ್ಟಣದ ಸ್ನೇಹಿತರಾದ ಮಣಿ ಮಾಗುಡಿಲು, ಬಿ. ಮಟಕರೆ ವಿಎಸ್ ಎಸ್ ಎನ್ ಸಂಘದ ನಿರ್ದೇಶಕ ಕಂದಲಿಕೆ ನಿಜಪ್ಪ, ಶಂಕರಲಿಂಗಪ್ಪ, ಕುಮಾರ್, ನಾಗೇಗೌಡ, ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.