nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    ಜಿಲ್ಲಾ ಸುದ್ದಿ November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    By adminNovember 13, 2025No Comments3 Mins Read
    sargur

    ಸರಗೂರು: ತಾಲೂಕಿನ ಕೋಡಂಬಹಳ್ಳಿ ಗ್ರಾಮದ ರೈತರ ಬಾಳೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಲಕ್ಷಾಂತರ ರೂ. ಮೌಲ್ಯದ ಬೆಳೆಯನ್ನು ನಾಶ ಮಾಡಿವೆ.

    ತಾಲೂಕಿನ ಹೂವಿನಕೊಳ ಗ್ರಾಮದ ಜವರಯ್ಯ ಎಂಬುವರ ಜಮೀನಿನಲ್ಲಿ 3 ಎಕರೆ ಜಮೀನು  ಬಾಳೆ ಬೆಳೆದು ಆನೆ ಹಾವಳಿ ಹೆಚ್ಚಾಗಿದ್ದು ಸಂಪೂರ್ಣ ನಾಶ ಮಾಡಿರುವ ಘಟನೆ ಸೋಮವಾರ  ರಾತ್ರಿ ನಡೆದಿದೆ. ಕಾಡಾನೆ ಹಿಂಡು ಬಾಳೆ ತೋಟ ನಾಶಪಡಿಸಿವೆ ಎಂದು ರೈತ ಜವರಯ್ಯ ಅಳಲು ತೋಡಿಕೊಂಡರು


    Provided by
    Provided by

    ಇನ್ನು 15 ದಿನದಲ್ಲಿ ಕಟಾವಿಗೆ ಬಂದಿದ್ದ 500 ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಮಾಡಿವೆ. ಸುಮಾರು ₹5 ಲಕ್ಷದಷ್ಟು ನಷ್ಟವಾಗಿದೆ ಎಂದು ತೋಟದ ಮಾಲಿಕ ಜವರಯ್ಯ ತಿಳಿಸಿದ್ದಾರೆ.

    ಗ್ರಾಮದಲ್ಲಿ ಐದಾರು ಆನೆಗಳ ಹಿಂಡಿದ್ದು ಎರಡು ಆನೆ ಮಾತ್ರ ತೋಟಕ್ಕೆ ನುಗ್ಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

    ವರ್ಷ ಪೂರ್ತಿ ಹಗಲು ರಾತ್ರಿ ದುಡಿದು ಬೆಳೆದ ಬೆಳೆ ರೈತನ ಕೈಗೆ ಬಂದ ತುತ್ತು ಕೈಗೆ ಬಾರದಂತಾಗಿದೆ. ಅರಣ್ಯದಂಚಿನ ಗ್ರಾಮದ ರೈತರ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆಗಳ ಮೇಲೆ ದಾಳಿಯಿಟ್ಟು ಬೆಳೆಗಳನ್ನು ನಾಶ ಮಾಡುತ್ತಲೆ ಇವೆ. ಇದರಿಂದ ಈ ಪ್ರದೇಶದಲ್ಲಿನ ರೈತರು ಆರ್ಥಿಕ ನಷ್ಟದ ಜತೆಗೆ ನಿತ್ಯ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜೀವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ‌.

    ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟದ ವ್ಯಾಪ್ತಿಯ ಲಂಕೆ, ಹೂವಿನಕೊಳ, ಹುಣಸಹಳ್ಳಿ, ಕುಂದೂರು, ಮನುಗನಹಳ್ಳಿ, ಪುರದಕಟ್ಟೆ ಗ್ರಾಮದಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ರೈತರ ಬೆಳೆಗಳ ಮೇಲೆ ಆನೆಗಳು ದಾಳಿ ನಡೆಸುತ್ತಲೇ ಇವೆ. ತಡರಾತ್ರಿ ಗಜಪಡೆಗಳು ಗ್ರಾಮದ ಜವರಯ್ಯ ಎಂಬುವರ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯನ್ನು ನಾಶಪಡಿಸಿದ್ದು, ಅಲ್ಲದೇ ಉಳಿದ ರೈತರ ಜಮೀನಿನಲ್ಲಿದ್ದ ಹಲಸು, ಜೋಳ, ತೆಂಗು,ಮಾವಿನ ಗಿಡಗಳನ್ನು ಕೂಡ ನೆಲಸಮ ಮಾಡಿವೆ.

    ಆಗ್ರಹ:

    ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳು ಅರಣ್ಯದಂಚಿನ ಗ್ರಾಮವಾದ್ದರಿಂದ ಆನೆಗಳು ನಿತ್ಯ ರೈತರ ಜಮೀನು ಮತ್ತು ತೋಟಗಳ ಮೇಲೆ ದಾಳಿ ಮಾಡುತ್ತಿವೆ. ರೈತರು ಮಳೆ ಇಲ್ಲದ ಕಾಲದಲ್ಲಿ ಬ್ಯಾಂಕ್‌ಗಳಲ್ಲಿ ಸಾಲ ಸೋಲ ಮಾಡಿ ಬೇಸಾಯಮಾಡಿ ಬೆಳೆದು ಬೆಳೆ ಕೈಗೆಬರುವಾಗ ದಾಳಿ ಮಾಡಿ ತಿಂದು ಹಾಕುತ್ತಿವೆ. ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದ್ದು, ಅವುಗಳ ದಾಳಿ ತಡೆಗಟ್ಟದಿದ್ದಲ್ಲಿ ರೈತರು ವಿಷ ಕುಡಿಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಅಲ್ಲದೆ, ಆನೆಗಳ ದಾಳಿಯಿಂದ ನಾಶವಾಗಿರುವ ಬೆಳೆಗಳಿಗೆ ಈಗಿನ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹ ಪಡಿಸಿದ್ದಾರೆ.

    ಗ್ರಾಮಸ್ಥರು ಕಿಡಿ:

    ಆನೆಗಳು ರೈತರ ಜಮೀನು, ತೋಟ ಮತ್ತು ಗ್ರಾಮದಂಚಿಗೆ ಬಾರದಂತೆ ಸೋಲಾರ್‌ ಫೆನ್ಸಿಂಗ್‌ ಹಾಕಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ. ಹಲವಾರು ಬಾರಿ ಕಾಡುಪ್ರಾಣಿಗಳ ದಾಳಿ ನಡೆಯುತ್ತಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಯಾವುದೇ ಕ್ರಮಕೈಗೊಂಡಿಲ್ಲ. ಅರಣ್ಯ ಇಲಾಖೆ ಆನೆಗಳನ್ನ ಓಡಿಸಲು ಪಟಾಕಿ ಸಿಡಿಸಿ ಪ್ರಯತ್ನ ಪಡುತ್ತಿದ್ದಾರೆ, ಹೊರತು ಅವುಗಳನ್ನು ಕಾಡಿಗಟ್ಟಲು ಪ್ರಯತ್ನ ಪಡುತ್ತಿಲ್ಲ ಆನೆಗಳು ಮಾತ್ರ ಅಲ್ಲಿಂದಿಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡುತ್ತಲೇ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಲೇ ಇವೆ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದರು.

    ರೈತ ಜವರಯ್ಯ ಮಾತನಾಡಿ, ಇಂದು ಏಲಕ್ಕಿ ಬಾಳೆ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಬಂದಿದೆ. ಪ್ರತಿ ಕೆಜಿಗೆ 80–100ರೂ ಬೆಲೆ ಇದೆ. ಇಂತಹ ಸಂದರ್ಭದಲ್ಲಿ ಸಾಲ ಮಾಡಿ ಮಳೆ ಇಲ್ಲದ್ದಿದಾಗ ಕಷ್ಟಪಟ್ಟು 4 ಲಕ್ಷ ಕ್ಕೂ ಹೆಚ್ಚು ಹಣ ಖರ್ಚು ಮಾಡಿ ಬಾಳೆ ಬೆಳೆದಿದ್ದೆ ಬೆಳೆ ಕಟಾವಿಗೆ ಬಂದಿತ್ತು. ಇಂತಹ ಸಮಯದಲ್ಲಿ ಆನೆಗಳು ದಾಂಗುಡಿ ಇಟ್ಟು ಬೆಳೆ ಹಾಳು ಮಾಡಿವೆ ಇದರಿಂದ ನಮ್ಮ ಬದುಕು ಮೂರಾಬಟ್ಟೆಯಾಗಿದ್ದು, ನಮಗೆ ದಾರಿ ಕಾಣದಾಗಿದೆ ಜತೆಗೆ ಆರ್ಥಿಕವಾಗಿ ನಷ್ಟವಾಗಿದ್ದು, ಮಾಡಿದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಸರಕಾರ ಕೊಡುವ ಪರಿಹಾರ ಯಾವುದಕ್ಕೂ ಸಾಲದು ಇದರಿಂದ ರೈತ ಆತ್ಮಹತ್ಯೆಹಾದಿ ಹಿಡಿಯಬೇಕಾಗಿದೆ. ಈ ಬಗ್ಗೆ ಸರಕಾರವಾಗಲಿ, ಯಾವುದೇ ಇಲಾಖೆಯ ಅಧಿಕಾರಿಗಳಾಗಲಿ ರೈತರ ನೆರವಿಗೆ ಬಂದು ಕೈಹಿಡಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದರಿಂದ ಆನೆಗಳ ಆಗಾಗ್ಗೆ ರೈತರ ಕೃಷಿ ಭೂಮಿ ಮೇಲೆ ದಾಂಗುಡಿ ಇಡುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂದರು.

    ಪರಿಹಾರಕ್ಕೆ ಒತ್ತಾಯ:

    ಆನೆದಾಳಿಯಿಂದ ಲಕ್ಷಾಂತರ ರೂ. ಮೌಲ್ಯದ ರೈತರ ಬೆಳೆ ನಾಶವಾದರೂ ಸರಕಾರದಿಂದ ಮಾತ್ರ ಕೆಲವೇ ಸಾವಿರ ರೂ. ಮಾತ್ರ ಪರಿಹಾರವಾಗಿ ನೀಡಿ ಕೈತೊಳೆದುಕೊಳ್ಳುತ್ತಿದೆ. ರೈತರ ಬವಣೆ ಹೇಳತೀರದಾಗಿದೆ ವರ್ಷಾನುಗಟ್ಟಲೇ ಕಷ್ಟಪಟ್ಟು ಬೆಳೆಸಿದ ಬೆಳೆಗಳನ್ನು ಆನೆಹಿಂಡು ಒಂದೇ ದಿನದಲ್ಲಿ ನಾಶ ಮಾಡುತ್ತಿರುವುದರಿಂದ ರೈತರು ಕಂಗಲಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಇನ್ನೂ ಮುಂದಾದರು, ಅರಣ್ಯಾಧಿಕಾರಿಗಳು ಕಾಡುಪ್ರಾಣಿಗಳ ದಾಳಿಗೆ ಮುಕ್ತಿ ನೀಡಬೇಕಿದೆ ಗ್ರಾಮದ ಮುಖಂಡರಾದ ಮಹೇಶ್ ,ಮತ್ತು ನಾಗರಾಜು ಒತ್ತಾಯಿಸಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.