ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಹಾಗೆಯೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಕ್ಕಿಲ್ಲ, ಸಿಗುವುದೂ ಇಲ್ಲ.
ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ವೇಳೆ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರಿಗೆ ತಡೆಯೊಡ್ಡಲಾಗಿದೆ. ಕಾಡುಗೊಲ್ಲರು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಅಡ್ಡಿಪಡಿಸಲಾಗಿದೆ. ಇದು ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ವಿರೋಧಿತನಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


