ತಿಪಟೂರು: ಸರ್ಕಾರಕ್ಕೆ ಶೇ.70ರಷ್ಟು ಬೆಂಗಳೂರು ನಗರ ತೆರಿಗೆ ನೀಡುತ್ತಿದೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಜಾರಿಯಾಗಿಲ್ಲ ಎಂದು ಮಾಹಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ನೊಣವಿನಕೆರೆ ಹೋಬಳಿ ಬಜಗೂರು ಗ್ರಾಮದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ ಧಾರ್ಮಿಕ ಸಂಸ್ಕೃತಿ ಉಳಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.
ನಮ್ಮ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವಿದ್ದ ಸಂದರ್ಭದಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಣ ಸೇರಿದಂತೆ ಪ್ರತಿ ಒಂದು ಸೌಲಭ್ಯ ಒದಗಿಸುವ ಜೆಡಿಎಸ್ ಸರ್ಕಾರ ಇದಾಗಿದೆ ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದರು.
ಈ ದೇಶದಲ್ಲಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹೆಚ್.ಡಿ.ದೇವೇಗೌಡ ಅವರು ತುಂಬಾ ಕೊಡುಗೆ ನೀಡಿದ್ದರು. ಕಾಶ್ಮೀರದ ಸಮಸ್ಯೆಗಳ ಪರಿಹಾರ ನೀಡುವ ಕೆಲಸ ಕೂಡ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರಗಳಲ್ಲಿರುವ ಸರ್ಕಾರಗಳು ಗ್ರಾಮೀಣ ಭಾಗದ ಜನತೆಗೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಾಸನದ ಶಂಭುನಾಥ ಸ್ವಾಮೀಜಿ ಅವರು, ಬಜಗೂರು ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕೊಂಡಿರುವುದು ಸಂತಸದ ವಿಚಾರ. ಕೆಂಪೇಗೌಡರ ವಿಚಾರ ಕೊಡುಗೆ ನಾಡಿಗೆ ಅಪಾರವಾಗಿದೆ ನಾಡಿನ ಸಂಸ್ಕೃತಿ ಉಳಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ, ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಮುಖಂಡರಾದ ಚಟ್ನಳ್ಳಿ ಲಿಂಗರಾಜ್, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ಡಾಕ್ಟರ್ ವಿವೇಚನ್ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700