nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ
    ತುಮಕೂರು July 26, 2022

    ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

    By adminJuly 26, 2022Updated:July 27, 2022No Comments2 Mins Read
    chithrakala collge tumakuru

    ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022  ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು  ಸೋಮವಾರ ಆಯೋಜಿಸಲಾಗಿತ್ತು.

    ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು,   ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು ಬೆಳವಣಿಗೆಗಾಗಿ ನಮ್ಮ ಸಂಘ ಸದಾ ಬೆನ್ನೆಲುಬಾಗಿ ನಿಂತು ಕೆಲಸ ಮಾಡಲು ನಾವು ಸಿದ್ಧರಿದ್ದೇವೆ.  ಕಾಲೇಜನ್ನು ಉಳಿಸಿಕೊಳ್ಳಲು ನಾವು ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಇದೇ ಸ್ಥಳದಲ್ಲಿ ಕಾಲೇಜು ಮುಂದುವರಿಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಮಾತನಾಡಿ,  ಈ ಕಾಲೇಜಿನ ಕುಂದುಕೊರತೆಗಳು, ಕೆಲಸ ಕಾರ್ಯಗಳಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ತನು, ಮನ, ಧನಗಳಿಂದ ಶ್ರಮಿಸುತ್ತಿರುವುದು ನನಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ. ಅವರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಹಿರಿಯ ಹಾಗೂ ಕಿರಿಯ ಕಲಾವಿದರನ್ನು ಅತಿಥಿ ಉಪನ್ಯಾಸಕರಾದ ಎಂ.ಎನ್.ಸುಬ್ರಹ್ಮಣ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.   ಅತಿಥಿ ಉಪನ್ಯಾಸಕರಾದ   ರೂಪ ಸಿ.ಎನ್., ನೇತ್ರಮ್ಮ ಎಸ್.ಕೆ., ನಾಗರಾಜ್ ಟಿ.ಎಂ., ಸತ್ಯನಾರಾಯಣ ಟಿ.ಎಸ್. ಭಾಗವಹಿಸಿದ್ದರು.

    ಶ್ರೀವಿದ್ಯಾ ಟಿ.ಎಸ್. ಪ್ರಾರ್ಥನಾ ಗೀತೆ ಹಾಡಿದರು. ಧನುಶ್ ಎಸ್ ಮತ್ತು ಸೌಮ್ಯ ಎಸ್. ವಿದ್ಯಾರ್ಥಿಗಳು ತಮ್ಮ  ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಭಾಗವಹಿಸಿ ಸುಂದರ ವರ್ಣ ಚಿತ್ರಗಳನ್ನು ರಚಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    July 17, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.