ಗುಬ್ಬಿ: ಹಮನಾಬಾದ ತಾಲ್ಲೂಕಿನ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ಮೇಲೆ ಹಲ್ಲೆ ನಡೆಸಿದ ಬಿ.ಎಸ್.ಪಿ.ಪಕ್ಷದ ಮುಖಂಡರ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಗುಬ್ಬಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ತಾಲೂಕು ಕಛೇರಿಯ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಕುರಿತು ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣ್ , ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಅನೇಕ ಒತ್ತಡಗಳ ನಡುವೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಅವರು ಬಿ ಎಸ್ ಪಿ ಮುಖಂಡರ ಮನವಿ ಸ್ವೀಕರಿಸಲು ಬಂದಿಲ್ಲ ಎಂಬ ಕಾರಣ ನೀಡಿ ಏಕಾಏಕಿ ಅವರ ಮೇಲೆ ಗುಂಪುಕಟ್ಟಿಕೊಂಡು ಹಲ್ಲೆ ಮಾಡಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಆರತಿ ಯವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಸದಸ್ಯರು. ಗ್ರಾಮ ಲೆಕ್ಕಾಧಿಕಾರಿ ಗಳು ಹಾಜರಿದ್ದರು.
ವರದಿ: ಮಂಜುನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy