nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ
    ರಾಜ್ಯ ಸುದ್ದಿ December 30, 2022

    ಸರ್ಕಾರಿ ನೌಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ

    By adminDecember 30, 2022No Comments2 Mins Read
    rajja sarkara

    ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿರುವುದಿಲ್ಲ. ಹಣಕಾಸಿನ ನೆರವು ನೋಡಿಕೊಂಡು ಒಪಿಎಸ್ ಜಾರಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.

    ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಎನ್‍ಪಿಎಸ್ ನಿಂದ ಓಪಿಎಸ್‍ಗೆ ಪರಿವರ್ತನೆ ಕುರಿತು ಸರ್ಕಾರದ ನಿಲುವೇನು ಎಂದು ಸದಸ್ಯ ತಳವಾರ ಸಾಬಣ್ಣ ಅವರು ಕೇಳಿದ ಪ್ರಶ್ನೆಗೆ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿದ ಜೆ.ಸಿ.ಮಾಧುಸ್ವಾಮಿ ಅವರು, ಹಳೆಯ ಪಿಂಚಣಿ ಯೋಜನೆಯ ಜಾರಿ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇರುವುದಿಲ್ಲ.


    Provided by
    Provided by

    ಓಪಿಎಸ್ ಜಾರಿಗೆ ಪದೆಪದೇ ಒತ್ತಾಯಿಸುವುದು ಸರಿಯಲ್ಲ. ಒಪಿಎಸ್ ಜಾರಿ ಸಂಬಂಧ ಪರಿಶೀಲಿಸಲು ಈಗಾಗಲೇ ಮೂರು ಸಭೆಗಳು ನಡೆದಿವೆ. ಹೊಸ ಪಿಂಚಣಿ ವ್ಯಾಪ್ತಿಗೆ ಬರುವ ನೌಕರರಿಗೆ ಈಗಾಗಲೇ ಹಲವಾರು ಸೌಲಭ್ಯ ನೀಡಲಾಗಿದೆ. ಒಪಿಎಸ್ ನೀಡುವ ಅವಶ್ಯಕತೆಯಿಲ್ಲ ಎಂದು ಸಮಿತಿಯು ವರದಿ ನೀಡಿದೆ ಎಂದು ತಿಳಿಸಿದರು.

    ಹಳೆಯ ಪಿಂಚಣಿ ಯೋಜನೆಯ ಜಾರಿ ಬಗ್ಗೆ ರಾಜ್ಯ ಸರ್ಕಾರವು ಪುನರ್ ಪರಿಶೀಲಿಸಬೇಕು ಎಂಬುದು ನಮ್ಮ ಕಳಕಳೀಯ ವಿನಂತಿಯಾಗಿದೆ. ನಾವು ಸರ್ಕಾರದ ಜೊತೆಗಿದ್ದೇವೆ. ಓಪಿಎಸ್ ಜಾರಿಯ ಒತ್ತಾಯಕ್ಕೆ ತಾವು ಈಗಲೂ ಬದ್ಧರಿದ್ದೇವೆ ಎಂದು ಪ್ರಕಟಿಸುವಂತೆ ಕೋರಿ ವಿಧಾನ ಪರಿಷತ್‍ನ ಸದಸ್ಯರಾದ ಆಯನೂರ ಮಂಜುನಾಥ ಮತ್ತು ಎಸ್ ವಿ ಸಂಕನೂರ ಅವರು ಸಭಾತ್ಯಾಗ ಮಾಡಿ, ಸಾತ್ವಿಕ ಪ್ರತಿಭಟನೆ ವ್ಯಕ್ತಪಡಿಸಿದರು.

    ಸದಸ್ಯರಾದ ಮರಿತಿಬ್ಬೇಗೌಡ ಅವರು ಸಹ ರಾಜ್ಯ ಸರಕಾರಿ ನೌಕರರಿಗೆ ಒಪಿಎಸ್ ಅಗತ್ಯತೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿಸಿದರು ಮತ್ತು ಸಭಾತ್ಯಾಗ ಮಾಡಿದರು.

    ಈ ಸಂದರ್ಭದಲ್ಲಿ ಸದಸ್ಯರಾದ ಸಂಕನೂರ ಅವರು ಮಾತನಾಡಿ, ಹೊಸ ಪಿಂಚಣಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ 2,97,925 ನೌಕರರ ಬೇಡಿಕೆಯನ್ನು ಸಾವಧಾನದಿಂದ, ಮಾನವೀಯತೆಯಿಂದ ಪರಿಶೀಲಿಸಬೇಕು. ನೌಕರರು ಒತ್ತಾಯದಂತೆ ಸದ್ಯಕ್ಕೆ ಒಪಿಎಸ್ ಜಾರಿಗೆ ತಾತ್ವಿಕ ಒಪ್ಪಿಗೆ ಕೊಡಬೇಕು. ಆ ಮೇಲೆ ಕಾನೂನು ತೊಡಕುಗಳನ್ನು ಸರಿಪಡಿಸಬಹುದು ಎಂದು ತಿಳಿಸಿದರು.

    ಇದಕ್ಕೆ ದನಿಗೂಡಿಸಿದ ಸದಸ್ಯರಾದ ಆಯನೂರ ಮಂಜುನಾಥ ಅವರು ಮಾತನಾಡಿ, ಹೊಸ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಹೇರಲ್ಪಟ್ಟಿದೆಯೇ ವಿನಃ ಒಪ್ಪಿತವಾಗಿ ಜಾರಿಯಾದ ಯೋಜನೆಯಲ್ಲ. ನೌಕರರ ಒತ್ತಾಯದಂತೆ ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ ಪರಿಶೀಲಿಸಲು ಮಾಡಿದ ಸಮಿತಿಯು ಸತ್ತ ರೀತಿಯಲ್ಲಿದೆ. ಸರ್ಕಾರವು ತಾಯಿ ಸ್ಥಾನದಲ್ಲಿದೆ. ನೌಕರರ ಬೇಡಿಕೆಯ ಬಗ್ಗೆ ತಾಳ್ಮೆಯಿಂದ ಚರ್ಚಿಸಬೇಕು. ಇದನ್ನು ಪುನರ್‍ಪರಿಶೀಲನೆ ಮಾಡಬೇಕು. ಒಪಿಎಸ್ ಜಾರಿ ಸಂಬಂಧ ಸಭೆ ನಡೆಸಿ ಅದಕ್ಕೆ ತಮ್ಮನ್ನು ಆಹ್ವಾನಿಸಿದಲ್ಲಿ ಒಪಿಎಸ್ ಜಾರಿ ಸಂಬಂಧ ಸರ್ಕಾರಕ್ಕೆ ಹೊರೆಯಾಗದು ಎಂಬುದನ್ನು ನಾವು ತಿಳಿಸಿಕೊಡುತ್ತೇವೆ ಎಂದರು.

    ತಮ್ಮ ನೋವಿಗೆ ನಾವುಗಳು ದನಿಯಾಗಬೇಕು ಎಂದೇ ನೌಕರರು ನಮಗೆ ಮತ ನೀಡಿ ಆಯ್ಕೆ ಮಾಡಿ ವಿಧಾನ ಮಂಡಲಕ್ಕೆ ಕಳುಹಿಸಿದ್ದಾರೆ. ಮತ ಹಾಕಿದವರಿಗೆ ಎನ್‍ಪಿಎಸ್, ಮತ ಪಡೆದವರಿಗೆ ಒಪಿಎಸ್ ಯಾಕೆ ಎಂದು ಪ್ರಶ್ನಿಸಿದ ಆಯನೂರ ಮಂಜುನಾಥ ಅವರು, ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎನ್ನುವುದಾದರೆ ವಿಧಾನ ಮಂಡಲದ ಸದಸ್ಯರಿಗೂ ಹೊಸ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

    ಒಪಿಎಸ್ ಜಾರಿಯ ಒತ್ತಾಯಕ್ಕೆ ದನಿಗೂಡಿಸಿದ ಸದಸ್ಯರಾದ ಪ್ರಕಾಶ ಹುಕ್ಕೇರಿ ಅವರು ಮಾತನಾಡಿ, ಒಪಿಎಸ್ ಜಾರಿಗೆ ಒತ್ತಾಯಿಸಿ ನೌಕರರು ಮನೆ, ಹೆಂಡತಿ, ಮಕ್ಕಳನ್ನು ಬಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನೌಕರರ ಬೇಡಿಕೆಯನ್ನು ಸರ್ಕಾರವು ಸಾವಧಾನದಿಂದ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ತಾವು ಕಳಕಳಿಯಿಂದ ಮನವಿ ಮಾಡುವುದಾಗಿ ತಿಳಿಸಿದರು. ಚಳಿಗಾಲದ ಈ ಅಧಿವೇಶದನಲ್ಲಿ ಒಪಿಎಸ್ ಜಾರಿಯ ಬಗ್ಗೆ ಸರ್ಕಾರವು ಸಕಾರಾತ್ಮಕವಾದ ನಿರ್ಧಾರವನ್ನು ಸ್ಪಷ್ಟಪಡಿಸಬೇಕು ಎಂದರು.

    43 ವರ್ಷಗಳಿಂದ ತಾವು ಶಿಕ್ಷಕರ, ನೌಕರರ ನೋವನ್ನು ಹತ್ತಿರದಿಂದ ನೋಡಿದ್ದೀರಿ. ಹಳೆಯ ಪಿಂಚಣಿ ಯೋಜನೆಯ ಜಾರಿಯ ವಿಷಯದ ಬಗ್ಗೆ ತಾವುಗಳು ಮೃದುಧೋರಣೆ ತಾಳಬಾರದು. ಒಪಿಎಸ್ ಜಾರಿ ಬೇಡಿಕೆಯ ವಿಷಯದ ನೇತೃತ್ವ ವಹಿಸಿ ಯೋಜನೆ ಜಾರಿಗೆ ಸಹಕರಿಸಬೇಕು ಎಂದು ಸದಸ್ಯ ಹುಕ್ಕೇರಿ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಮನವಿ ಮಾಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.