ನವದೆಹಲಿ : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ನೌಕರಿಯು ಹಕ್ಕಲ್ಲ ಎಂದು ಅಭಿಪ್ರಾಯಪಟ್ಟಿದೆ. ಅನುಕಂಪದನ ನೌಕರಿ ಒಂದು ರೀತಿಯ ವಿನಾಯ್ತಿಯೇ ವಿನಃ ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ ಕಂಪನಿ ಟ್ರಾವಂಕೋರ್ ಲಿ.ಗೆ ಕೇರಳ ಹೈಕೋರ್ಟ್ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಎ. ಆರ್. ಶಾ ಹಾಗೂ ನ್ಯಾ. ಕೃಷ್ಣ ಮುರಾರಿ ಅವರಿದ್ದ ಪೀಠ, ಟ್ರಾವಂಕೋರ್ ಲಿ. ಉದ್ಯೋಗಿಯಾಗಿದ್ದ ಮಹಿಳೆಯ ತಂದೆ ತೀರಿಕೊಂಡು 2 ದಶಕಗಳೇ ಕಳೆದಿವೆ. ಹೀಗಾಗಿ ಅರ್ಜಿದಾರ ಮಹಿಳೆ ಅನುಕಂಪದ ನೌಕರಿ ಪಡೆಯಲು ಅರ್ಹಳಲ್ಲ ಎಂದು ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy