ವಿಜಯಪುರ : ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ನಡೆದಿದೆ.
ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಶಿಕ್ಷಕಿಯ ಪುತ್ರ ಮುಜಾಮಿಲ್ ಮೇಲೆಯೂ ಹಲ್ಲೆ ನಡೆಸಲಾಗಿದೆ. ಮುಜಾಮಿಲ್ ಸ್ಥಿತಿ ಗಂಭೀರವಾಗಿದ್ದು ವಿಜಯಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭೀಕರ ಹತ್ಯೆಯಿಂದಾಗಿ ಇಂಡಿ ಪಟ್ಟಣದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾಗಿ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


