ಪಟ್ನಾ: ರಾಜ್ಯದಲ್ಲಿನ ಸರ್ವಪಕ್ಷಗಳ ಅಭಿಪ್ರಾಯ ಪಡೆದ ಬಳಿಕ ‘ಜಾತಿ’ ಸಮೀಕ್ಷೆ ಕಾರ್ಯವನ್ನು ತಮ್ಮ ಸರ್ಕಾರ ಶೀಘ್ರವೇ ಕೈಗೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ.
ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಮೇ 27ರಂದು ಸರ್ವಪಕ್ಷಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕ್ರೋಡೀಕರಿಸುತ್ತೇವೆ. ಬಳಿಕ ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸಂಪುಟದ ಮುಂದಿಡಲಾಗುತ್ತದೆ ಎಂದು ತಿಳಿಸಿದರು.
ಮೇ 27ರಂದು ಉದ್ದೇಶಿಸಿರುವ ಸರ್ವಪಕ್ಷಗಳ ಸಭೆಗೆ ಕೆಲವು ಪಕ್ಷಗಳು ಸಮ್ಮತಿಸಿವೆ. ಕೆಲವು ಪಕ್ಷಗಳು ಇನ್ನಷ್ಟೇ ಉತ್ತರ ನೀಡಬೇಕಿದೆ. ಈ ಕುರಿತ ಪ್ರಸ್ತಾವನೆಯನ್ನು ಸಂಪುಟದ ಮುಂದಿಟ್ಟ ಬಳಿಕ, ಜಾತಿ ಆಧಾರಿತ ಸಮೀಕ್ಷೆ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5