ಹೆಚ್.ಡಿ.ಕೋಟೆ: ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸಸಿ ನೆಡುವ ಮತ್ತು ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ವತಿಯಿಂದ ಒಟ್ಟು 20 ಗಿಡಗಳನ್ನು ಕಾಲೇಜಿಗೆ ನೀಡಲಾಯಿತು. ಈ ವೇಳೆ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ , ಪ್ರಬುದ್ಧ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಯುವಕರಿಗೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಯುವ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಡಾ.ಕುಮಾರ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಉಷಾದೇವಿ ಮಾತನಾಡಿ, ರೆಡ್ ಕ್ರಾಸ್ ಸಮಿತಿಯಿಂದ ಒಟ್ಟು 20 ಗಿಡಗಳನ್ನು ಬಹಳ ಜವಾಬ್ದಾರಿಯುತವಾಗಿ ಪೋಷಣೆ ಮಾಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಸಿಬ್ಬಂದಿಗಳಾದ ಸತೀಶ್ ಮೇತ್ರಿ, ಶಿವಲಿಂಗ್ ಹ್ಯಾಂಡ್ ಪೋಸ್ಟ್, ನಿಂಗರಾಜು, ಸಿದ್ಧಾರ್ಥ, ಯುವ ರೆಡ್ ಕ್ರಾಸ್ ಸಂಚಾಲಕರಾದ ಡಾ.ಸವಿತಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy