ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ದಂಡಿನ ಶಿವರ ಹೋಬಳಿ ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿಯ ಕುರುಬರಹಳ್ಳಿ ಬ್ಯಾಲ ಗ್ರಾಮದಲ್ಲಿ ತಡರಾತ್ರಿ ಸತತವಾಗಿ ಸುರಿಯುತ್ತಿರುವ ಮಳೆಗೆ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಬರಹಳ್ಳಿ ಬ್ಯಾಲದ ವಾಸಿಯಾದ ಗಂಗಮ್ಮ ಎಂಬ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದಿದೆ.
ಕಳೆದ ಸುಮಾರು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ನನೆದು ಮನೆಯ ಮೇಲ್ಚಾವಣಿಯ ಹೆಂಚು ,ಶೀಟ್ ಎಲ್ಲವೂ ಒಮ್ಮೆಲೆ ಮುರಿದು ಕೆಳಗೆ ಬಿದ್ದಿದೆ. ಇದರಿಂದಾಗಿ ಮನೆಯಲ್ಲಿ ಟಿವಿ ಬೀರು ಮಂಚ ಹಾಗೂ ಬೆಲೆಬಾಳುವ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಯಾಗಿದೆ. ಆಹಾರ ಪದಾರ್ಥಗಳು ಮಣ್ಣು ಪಾಲಾಗಿದ್ದರೆ, ಪಾತ್ರೆ ಇತರೆ ಸಾಮಗ್ರಿಗಳು ಮೇಲಿಂದ ಬಿದ್ದ ರಭಸಕ್ಕೆ ನುಜುಗುಜ್ಜಾಗಿವೆ.
ಸ್ಥಳಕ್ಕೆ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮನೆ ಕಳೆದುಕೊಂಡ ನಿರ್ಗತಿಗಳಾದ ಬಡ ಮಹಿಳೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy