ಉಡುಪಿ: ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವರಾಗುತ್ತಾರೆ ಎಂದು ಅಂದುಕೊಂಡರೆ ಅದು ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಮಾತನಾಡಿರುವುದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಿಗೆ ಕ್ಷಮಾಪಣೆ ಕೇಳಬೇಕು ಎಂದರು.
ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನವಾಗುವ ಹಾಗೆ ವರ್ತನೆ ಮಾಡಬಾರದು ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


