ಮೈಸೂರು:ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂಬ ಆರೋಪ ವಿಚಾರ ಸತೀಶ್ ಜಾರಕಿಹೊಳಿ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂಥಾ ಸಚಿವರು ಇದ್ದಾರೆ? ಸಚಿವರಿಗೆ ಓರಿಯಂಟಿಯೇಶನ್ ಅಗತ್ಯವಿದೆ. ಅವರಿಗೆ ಯಾವದರೂ ಬಗ್ಗೆಯೂ ಅರಿವಿಲ್ಲದೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಅವಮಾನ. ಸಾರ್ವಜನಿಕವಾಗಿ ಏನು ಮಾತನಾಡಬೇಕು ? ಅನ್ನೋದು ಗೊತ್ತಿಲ್ಲ. ಈ ರೀತಿ ಅಸಂಬದ್ಧವಾದ ಹೇಳಿಕೆ ಕೊಟ್ಟರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಸರ್ವರ್ ಅನ್ನು ಯಾರು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ. ಈ ರೀತಿ ಹೇಳಿಕೆ ಕೊಟ್ಟು ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


