ಬೆಂಗಳೂರು: ಶೀಘ್ರವೇ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಬೇಡಿಕೆಯಿಟ್ಟಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ ಎಂದರು.
ಸದ್ಯ ಡಿ.ಕೆ.ಶಿವಕಮಾರ್ ಅವರು ಅಧ್ಯಕ್ಷರಾಗಿದ್ದು, ಇವರನ್ನೇ ಮುಂದುವರಿಸುವುದಾದರೆ ಅದನ್ನು ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx