ತುಮಕೂರು: ಕಾಂಗ್ರೆಸ್ ಯಾವಾಗಲೂ ಪ್ರಾಮಾಣಿಕ ಅಭ್ಯರ್ಥಿಗಳನ್ನು ಗುರುತಿಸಿ ಅವಕಾಶ ಕೊಡುತ್ತಿದೆ, ಸತ್ಯಕ್ಕೆ, ಪ್ರಾಮಾಣಿಕತೆಗೆ ದೊರೆತಿರುವ ಗೆಲುವು ಅಂತಾ ಭಾವಿಸುತ್ತೇನೆ ಎಂದು ತುಮಕೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಹೇಳಿದರು.
ಕಾಂಗ್ರೆಸ್ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ಕೊಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ತುಮಕೂರು ನಗರದ ಏಳಿಗೆ ಹಾಗೂ ಶಾಂತಿಗಾಗಿ ಶ್ರಮಿಸುತ್ತೇನೆ. ಎಲ್ಲಾ ಪಕ್ಷದಲ್ಲೂ ಭಿನ್ನಾಭಿಪ್ರಾಯ ಇರುತ್ತದೆ. ಎಲ್ಲರನ್ನೂ ವಿಶ್ವಾಸದಿಂದ ತೆಗೆದುಕೊಂಡು ಹೋಗ್ತೇನೆ. ನಾನು ಹಿರಿಯ ಮುಖಂಡ ಷಫಿ ಅಹ್ಮದ್ ಜೊತೆ 20 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಷಫಿ ಅಹ್ಮದ್ ಸೇರಿ ಎಲ್ಲಾ ಅಸಮಾನಿತರ ಜೊತೆ ಸೌಹಾರ್ದಯುತವಾಗಿ ಮಾತನಾಡ್ತೇನೆ. ಷಫಿ ಅಹ್ಮದ್ ಹಾಗೂ ಪಕ್ಷದ ಮುಖಂಡರ ಜೊತೆಯಲ್ಲೇ ಪ್ರಚಾರ ಕಾರ್ಯ ಮಾಡ್ತೇನೆ ಎಂದು ಅವರು ಹೇಳಿದರು.
ಅರ್ಹರನ್ನು ಪಕ್ಷ ಗುರುತಿಸಿದೆ. ಪಕ್ಷದಲ್ಲಿ ಸಾವಿರಾರು ಮಂದಿ ಇರ್ತಾರೆ. ಅದರಲ್ಲಿ ಒಬ್ಬರಿಗೆ ಟಿಕೆಟ್ ಸಿಗೋದು. ಈ ಬಾರಿ ನನಗೆ ಅವಕಾಶ ಸಿಕ್ಕಿದೆ. ಈ ಹಿಂದೆ ಅವರಿಗೂ ಸಿಕ್ಕಿತ್ತು. ಆಗ ನಾನೂ ಕೆಲಸ ಮಾಡಿದ್ದೆ. ಇದೀಗ ನನ್ನ ಪರವಾಗಿಯೂ ಎಲ್ಲರೂ ಕೆಲಸ ಮಾಡುವ ವಿಶ್ವಾಸ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA