ತುಮಕೂರು: KPS–ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸಿರಾ ತಾಲೂಕಿನ ಜೋಡಿದೇವರಹಳ್ಳಿ ಮತ್ತು ನಾಗೇನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು ,ಪೋಷಕರು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರಾದ ಶ್ರೀನಿವಾಸ ಮೂರ್ತಿ ಅವರು ಮಾತನಾಡಿ, ಗ್ರಾಮದಲ್ಲಿ ಇರುವಂತ ಸರ್ಕಾರಿ ಶಾಲೆಗಳನ್ನ ಮುಚ್ಚಿ ವಿಲೀನ ಮಾಡುವಂತ ಕ್ರಮ ಸರಿಯಲ್ಲ. ಹಳ್ಳಿಗಾಡಿನಲ್ಲಿ ಇರುವಂತ ಶಾಲೆಗಳಿಗೆ ಮಕ್ಕಳು ನೇರವಾಗಿ ಹೋಗಿ ಮನೆಗೆ ಬರುತ್ತಾರೆ. ಈ ವ್ಯವಸ್ಥೆಯನ್ನು ಬದಲಾಯಿಸಿ, ಕರ್ನಾಟಕ ಪಬ್ಲಿಕ್ ಶಾಲೆ ಮ್ಯಾಗ್ನೆಟ್ ಹೆಸರಿನಲ್ಲಿ 5 ಕಿ.ಮೀ. ವ್ಯಾಪ್ತಿಯ ಒಳಗಿನ ಶಾಲೆಗಳನ್ನು ಮುಚ್ಚುವುದು ತುಂಬಾ ಖಂಡನೀಯ. ಇದರ ಬದಲು ಕೆಪಿಎಸ್ ಶಾಲೆಯಲ್ಲಿ ಮೂಲಭೂತ ಸೌಕರ್ಯ ಕೊಟ್ಟು ಒಳ್ಳೆಯ ಶಿಕ್ಷಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ ಅದನ್ನು ನಮ್ಮ ಶಾಲೆಯಲ್ಲಿ ಕೊಟ್ಟು ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ಹೇಳಿದರು.
ಪ್ರತಿಭಟನೆಯನ್ನ ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಸರ್ಕಾರ KPS– ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000 ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲೊರಟಿದೆ. ಜೋಡಿದೇವರಹಳ್ಳಿ ಶಾಲೆಯನ್ನ ಮುಚ್ಚಿ, ಬ್ರಹ್ಮಸಂದ್ರಕ್ಕೆ ವಿಲೀನ ಮಾಡುವ ನೀತಿ ಸರಿಯಲ್ಲ. ಈ ದೇಶದಲ್ಲಿ ಶಿಕ್ಷಣ ಸಾವಿತ್ರಿಬಾಯಿ ಪುಲೆ, ಜ್ಯೋತಿರಾವ್ ಪುಲೆ, ವಿದ್ಯಾಸಾಗರ್ ಮತ್ತು ಹಲವಾರು ಮಹಾನ್ ವ್ಯಕ್ತಿಗಳ ಹೋರಾಟದ ಶ್ರಮದಿಂದ ಶಿಕ್ಷಣ ಬಂದಿದೆ. ಈ ಎಲ್ಲಾ ಮಹಾನ್ ವ್ಯಕ್ತಿಗಳ ಆಶಯ ಇದ್ದಿದ್ದು ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕಾಗಿ ಸಿಗಬೇಕೆಂದು, ಆದರೆ, ಇಂದು ಇವರೆಲ್ಲ ಆಶಯವನ್ನು ಮಣ್ಣು ಪಾಲು ಮಾಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಇದರ ವಿರುದ್ಧ ಎಲ್ಲರೂ ಒಂದಾಗಿ ಬಲಿಷ್ಟ ಹೋರಾಟ ಬೆಳೆಸಬೇಕೆಂದು ಕರೆ ನೀಡಿದರು.
ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್ ಓನ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಭರತ್, ಊರಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


