ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರನ್ಯಾ ರಾವ್ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ಬಚಾವ್ ಆಗಲು ಪ್ರಯತ್ನಿಸಿರುವುದಾಗಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ರನ್ಯಾ ರಾವ್ ಕೇಸ್ ಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರು ಆಕೆಯನ್ನು ರಕ್ಷಿಸಲು ಪ್ರಭಾವ ಬೀರುತ್ತಿದ್ದಾರೆ. ಸಾರ್ವಜನಿಕವಾಗಿಯೂ ಮಾತನಾಡುತ್ತಿದ್ದಾರೆ. ಆದರೆ ಪ್ರಕರಣ ಸಿಬಿಐ ತೆಗೆದುಕೊಂಡ ಕಾರಣ, ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವುದು ಮುನ್ನೆಲೆಗೆ ಬರುತ್ತದೆ ಎಂದರು.
ರನ್ಯಾ ರಾವ್ ಒಡೆತನದ ಕಂಪನಿಗೆ ಸರ್ಕಾರ ಜಮೀನು ಮಂಜೂರು ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಕ್ರಿಮಿನಲ್ ಕೇಸ್ ಆಗಿದೆ. ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ತಪ್ಪಿದ್ದರೆ ಹೇಳಲಿ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳಾಗಿಲ್ಲ. ಜಮೀನು ಮಂಜೂರಾತಿ ಪ್ರಕ್ರಿಯೆ ಬೇಗ ಆಗಿದೆ ಎಂಬುದು ಇವರ ಆರೋಪ. ನಿಮ್ಮದೇ ಸರ್ಕಾರ ಇದೆ. ಜಾಗ ಮಂಜೂರಾತಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದನ್ನು ತನಿಖೆ ಮಾಡಿಸಿ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4