ತುರುವೇಕೆರೆ: ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ಅವರ ಕಚೇರಿಯಲ್ಲಿ , ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನ ಶಿಲ್ಪಿ, ಡಾ ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 300 ಜನ ಕಾರ್ಯಕರ್ತರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಬೆಮೆಲ್ ಕಾಂತರಾಜು, ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ಒಡೆಯಲು ಹೊರಟಿದ್ದಾರೆ. ಆದರೆ , ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂದು ಕರೆ ನೀಡಿದರು.
ಎಂ.ಡಿ.ಮೂರ್ತಿ ಮಾತನಾಡಿ, ಭಾರತದ ಈಗಿನ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಸಂವಿಧಾನ ಬದಲಾವಣೆ ಮಾಡುತ್ತೇವೆ, ನಾವು ಬದಲಾವಣೆ ಮಾಡಲೇ ಬಂದಿದ್ದೇವೆ ಎಂದು ಬೇರೆಯವರ ಬಾಯಿಯಿಂದ ಮಾತನಾಡಿಸುತ್ತಿದ್ದಾರೆ. ಆದರೆ ಅದು ಇಲ್ಲಿ ನಡೆಯದು, ಸಂವಿಧಾನ ಬದಲಾವಣೆಗೆ ನಾವು ಬಿಡುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದು, ಪ್ರತಿರೋಧ ಮಾಡೋಣ ಎಂದರು.
ಈ ಕಾರ್ಯಕ್ರಮದಲ್ಲಿ ತಾಲೋಕು ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್, ನಾಗೇಶ್, ತಾವರೆಕೆರೆ ದಾನಿಗೌಡರು, ಬುಗುಡನಹಳ್ಳಿ ಕೃಷ್ಣಮೂರ್ತಿ, ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಲಕ್ಶ್ಮೀ ದೇವಮ್ಮ, ಜೋಗಿಪಾಳ್ಯ ಶಿವರಾಜು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹನುಮಂತಯ್ಯ ಮತ್ತಿತರರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy