ಮೈಸೂರಿನ ಕೆ.ಆರ್.ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ. ರಾಮೇಗೌಡ(75), ಗೌರಮ್ಮ(70) ಮೃತ ದಂಪತಿ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರಾಮೇಗೌಡ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಕಾರಣ ಗೌರಮ್ಮ ಜಮೀನಿಗೆ ಹೋಗಿ ನೋಡಿದಾಗ ಪತಿ ಶವವಾಗಿದ್ದರು. ಇದನ್ನು ಕಂಡು ಆಕೆ ಆಘಾತದಿಂದ ಕುಸಿದು ಬಿದ್ದಿದ್ದಾರೆ.
ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ರಾಮೇಗೌಡ ರ ಅಂತ್ಯಸಂಸ್ಕಾರದ ವೇಳೆ ಗೌರಮ್ಮ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಅಕ್ಕಪಕ್ಕದಲ್ಲೇ ದಂಪತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz