ಗದಗ: ಮಗನ ಸಾವಿನ ಸುದ್ದಿ ಕೇಳಿ ತಾಯಿ ನಿಧನರಾದ ಮನಕುಲುಕುವ ಘಟನೆ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ನಡೆದಿದೆ.
ಮಗ ಶಿವರುದ್ರಯ್ಯ ಪೂಜಾರ್ (38) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ನಿನ್ನೆ ಮೃತಪಟ್ಟಿದ್ದಾರೆ. ಮಗ ಮೃತಪಟ್ಟಿರುವ ಸುದ್ದಿ ಕೇಳಿ ತಾಯಿ ಬಸಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. ಇಬ್ಬರು ಸಾವಿನಿಂದ ಇಡೀ ಗ್ರಾಮದ ಜನರು ಶೋಕಸಾಗರದಲ್ಲಿ ಮುಳುಗಿದ್ದಾರೆ. ತಾಯಿ ಮತ್ತು ಮಗನ ಶವಗಳ ಅಂತಿಮ ಅಂತ್ಯಕ್ರಿಯೆ ನಡೆಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy