ಧಾರವಾಡ: ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಯಾವುದೇ ಕಾರಣಕ್ಕೂ ಮಹಾ ಸಚಿವರಿಗೆ ರಾಜ್ಯ ಪ್ರವೇಶ ಮಾಡಲು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದರು.
ಈ ಬೆಳವಣಿಗೆ ಬೆನ್ನಲ್ಲೇ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಹಾರಾಷ್ಟ್ರ ಸಚಿವರಿಗೆ ಉತ್ತರಿಸಲೆಂದೇ 100 ವಾಹನಗಳಲ್ಲಿ ನಾವು ಬೆಳಗಾವಿಗೆ ಹೊರಟಿದ್ದೇವೆ.
ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸಚಿವರು ಪದೇ ಪದೇ ಕರ್ನಾಟಕವನ್ನು ಅವಮಾನಿಸುತ್ತಿದ್ದಾರೆ. ಅವರ ಹೇಳಿಕೆಗಳು ಕನ್ನಡಿಗರನ್ನು ಪ್ರಚೋದಿಸುತ್ತಿದೆ. ಬೆಳಗಾವಿಯಲ್ಲಿರುವ ಮರಾಠಿಗರನ್ನೂ ಪ್ರಚೋದಿಸುತ್ತಿದೆ. ಇದೆಲ್ಲದಕ್ಕೂ ಉತ್ತರ ಕೊಡಬೇಕಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy