ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ/ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಫೆಬ್ರವರಿ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಅಮಾನಿಕೆರೆ ರಸ್ತೆ ಕನ್ನಡ ಭವನದಲ್ಲಿ “ಸವಿತಾ ಮಹರ್ಷಿ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಯಂತಿ ಕಾರ್ಯಕ್ರಮದ ಪ್ರಯುಕ್ತ ತುಮಕೂರಿನ ಸ್ವದೇಶಿ ವಿಶ್ವಣ್ಣ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ನಂತರ ಸವಿತಾ ಸಮಾಜದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಸಹಾಯಕ ಕೃಷಿ ನಿರ್ದೇಶಕ ಅಶ್ವತ್ಥನಾರಾಯಣ, ತಾಲ್ಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷ ಸುಬ್ರಮಣ್ಯ ಎನ್., ಶಿವಣ್ಣ ಊರುಕೆರೆ, ಡೋಲು ವಿದ್ವಾನ್ ಹೆಚ್.ಜಿ. ಶಿವಶಂಕರ್ ಹಾಗೂ ಎನ್.ಮಂಜುಳ ಲೀಡೋ ನಾಗರಾಜು ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.
ಸಮಾಜದ ಗಣ್ಯರು, ಮುಖಂಡರು, ಕಲಾವಿದರು, ಜಿಲ್ಲೆಯ ಸವಿತಾ ಸಮಾನದ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಈಶ್ವರ್ ಕು.ಮಿರ್ಜಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx