ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲೆ, ತಾಲ್ಲೂಕು, ನಗರ ಸವಿತಾ ಸಮಾಜದ ವತಿಯಿಂದ ಜನವರಿ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಗಾರ್ಡನ್ ರಸ್ತೆ ಸವಿತಾ ಸಮುದಾಯ ಭವನದಲ್ಲಿ ‘ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು. ಕಾರ್ಯಕ್ರಮ ಕುರಿತು ಚಿಕ್ಕನಾಯಕನಹಳ್ಳಿ ಸಾದರಹಳ್ಳಿಯ ನಿವೃತ್ತ ಪದವೀಧರ ಮುಖ್ಯ ಶಿಕ್ಷಕ ಜಿ. ಗೋವಿಂದರಾಜು ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಸವಿತಾ ಸಮಾಜದಲ್ಲಿ ವಿಶೇಷ ಸೇವೆ ಸಲ್ಲಿಸಿರುವವರನ್ನು ಸನ್ಮಾನಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


