ತಿಪಟೂರು: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡ ಬೇಕು. ಜಾತಿ ನಿಂದಿಸುವವರ ವಿರುದ್ಧ ಸರ್ಕಾರಿ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಸವಿತಾ ಸಮಾಜ ಮೀಸಲಾತಿ ಮತ್ತು ಹೋರಾಟ ಸಮಿತಿ ವತಿಯಿಂದ ಒತ್ತಾಯಿಸಿತು.
ತಿಟೂರಿನಲ್ಲಿ ಈ ಸಂಬಂಧ ಸಂಘಟನೆಯ ರಾಜ್ಯಾಧ್ಯಕ್ಷ G. ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ್, ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡಬೇಕು. ಹಾಗೂ ಜಾತಿ ನಿಂದಕರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಅವರು ಒತ್ತಾಯಿಸಿದರು.
ಹೊರ ರಾಜ್ಯದಿಂದ ಮತ್ತು ಹೊರ ದೇಶದಿಂದ ಆಗಮಿಸಿರುವವರು ನಮ್ಮ ರಾಜ್ಯಕ್ಕೆ ಬಂದು ನೆಲೆಸಿ ನಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದು, ನಮ್ಮ ಕುಲಕಸುವಾದ ಕ್ಷೌರಿಕ ವೃತ್ತಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಕುಲಬಾಂಧವರ ಆದಾಯಕ್ಕೆ ಕತ್ತರಿ ಹಾಕುತ್ತಿದ್ದಾರೆ. ನಮ್ಮ ಜನಾಂಗದ ಒಳಿತಿಗಾಗಿ ನಾವು ಈ ಸಮಿತಿ ರಚಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy