ತುಮಕೂರು: ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯು ಸಾವಿತ್ರಿ ಬಾಯಿ ಪುಲೆ ಮಹಿಳಾ ಸ್ವ ಸಹಾಯ ಸಂಘ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ದಲಿತ ಸಂಘಟನೆಗಳ ಒಕ್ಕೂಟ ದ ವತಿಯಿಂದ ಹೊಸಹಳ್ಳಿ ಗ್ರಾಮದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಮುಖಂಡರು ಸಾವಿತ್ರಿ ಬಾಯಿ ಫುಲೆ ಅವರ ಇತಿಹಾಸವನ್ನು ತಿಳಿಸಿದರು. ಬಳಿಕ ಸಿಹಿ ಹಂಚುವ ಮೂಲಕ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಸಾಹಿತಿ ಎಂ.ರಾಮಯ್ಯ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರು ನಟರಾಜು ಜಿ.ಎಲ್. ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರು ರಾಜಣ್ಣ ಯಲದಬಾಗಿಯವರನ್ನು ಗ್ರಾಮದ ಸಾವಿತ್ರಿಬಾಯಿ ಫುಲೆ ಸ್ವಸಹಾಯ ಸಂಘದವರು ಸನ್ಮಾನ ಮಾಡಲಾಯಿತು.
ಈ ವೇಳೆ ಮಹಿಳಾ ಅಧ್ಯಕ್ಷೆ ಮಂಜುಳಾ ಹಾಗೂ ಸಂಘದ ಪದಾಧಿಕಾರಿಗಳಾದ ಮಂಜುಳ ಎನ್, ರೂಪಾ, ಶ್ವೇತಾ, ಅನು, ರೂಪ, ಅಂಜನಮ್ಮ, ಅಂಜಿನಮ್ಮ, ಗೌರಮ್ಮ, ಅನಂತಕುಮಾರಿ, ನಂದಕುಮಾರಿ, ಮಂಜಮ್ಮ, ಮಾಲಾಶ್ರೀ, ಜಯಲಕ್ಷ್ಮೀ, ಶಕುಂತಲಾ, ಸಿದ್ದಗಂಗಮ್ಮ, ಶಿವಮ್ಮ ಭಾಗವಹಿಸಿದ್ದರು. ಎಲ್ಲಾ ಮಹಿಳೆಯರು ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy