nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ
    ಪಾವಗಡ February 9, 2025

    ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ

    By adminFebruary 9, 2025No Comments2 Mins Read
    pavagada

    ಪಾವಗಡ: ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯ ಎಸ್ ಬಿ ಕಾನ್ ಸ್ಟೇಬಲ್ ಮಟ್ಕಾ ಮತ್ತು ಇಸ್ಪೀಟ್ ದಂಧೆಕೋರರ ಜೊತೆ ಶಾಮೀಲಾಗಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ

    ಭಾನುವಾರದಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿ, ಅರಸೀಕೆರೆ ತಾಣ ವ್ಯಾಪ್ತಿಯಲ್ಲಿ ಸರಿಯಾಗಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಸುವುದಿಲ್ಲ, ಬರೀ ನಾಲ್ಕು ಜನ ದಂಧೆಕೋರರನ್ನ ಸೇರಿಸಿ ಸಭೆ ನಡೆಸುತ್ತಾರೆ. ಅಲ್ಲಿನ ಜನರಿಗೆ ಇದರ ಬಗ್ಗೆ ಜಾಗೃತಿ ಇಲ್ಲ ದಲಿತರು ಠಾಣೆಗೆ ಹೋಗಿ ದೂರು ನೀಡಲು ಹೋದರೆ ದೂರು ಸ್ವೀಕರಿಸದೆ ಅಲೆದಾಡಿಸುತ್ತಾರೆ ಮತ್ತು ಡೀಲ್ ಮಾಡಿಕೊಳ್ಳುತ್ತಾರೆ ಎಂದು ನೇರವಾಗಿ ಎಸ್ ಬಿ ಕಾನ್ ಸ್ಟೇಬಲ್ ಚೌಕ ತಾಲಿ ವಿರುದ್ಧ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರಿಗೆ ದೂರು ಹೇಳಿದರು.

    ಅದೇ ರೀತಿ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಪೇದೆ ಸದ್ದಂ ಅವರು ಕೂಡ ಮರಳು ದಂಧೆ ಗೌರವ ಜೊತೆ ಶಾಮೀಲಾಗಿ ಮರಳು ದಂಧೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಮರಳು ದಂಧೆಕೋರರಿಗೆ ನೀಡುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಸಮರ್ಪಕವಾಗಿ ತಮ್ಮ ಕರ್ತವ್ಯವನ್ನ ನಿರ್ವಹಿಸುತ್ತಿಲ್ಲ ಎಂದು ಸಭೆಯಲ್ಲಿ ದಲಿತ ಮುಖಂಡರು ಆಕ್ರೋಶದಿಂದ ಹೇಳಿದರು.

    pavagada

    ಪಾವಗಡ ಪಟ್ಟಣದಲ್ಲಿ ಪುಂಡಪೋಕರಿಗಳು ಗಾಂಜಾ ಎಣ್ಣೆ ಸೇರಿದಂತೆ ಮತ್ತಿತರ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ, ಕಾಲೇಜು ಮಕ್ಕಳಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ಬಂಗಾರಪ್ಪ ಆರೋಪಿಸಿದರು.

    ಸಭೆಯಲ್ಲಿ ಡಿವೈಎಸ್ಪಿ ಮಂಜುನಾಥ್ ಮಾತನಾಡುತ್ತಾ, ಇತ್ತೀಚಿಗೆ ನಡೆಯುತ್ತಿರುವ ಕಳ್ಳತನಗಳನ್ನು ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ಪಟ್ಟಣಕ್ಕೆ ಬಂದು ಹೋಗುವಂತಹ ಗಾಡಿಗಳನ್ನು ಪರಿಶೀಲಿಸಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದೇವೆ, ಮುಂದಿನ ತಿಂಗಳು ಅರಸೀಕೆರೆಯಲ್ಲಿ ಎಸ್ಸಿ ಎಸ್ಟಿ ಕೊಂದು ಕೊರತೆ ಸಭೆಯನ್ನು ನಡೆಸುವ ವೇಳೆ ಸ್ವತಃ ನಾನೇ ಬಂದು ಸಮಸ್ಯೆಯನ್ನು ಬಗೆಹರಿಸುತ್ತೇನೆ ಯಾವುದೇ ಸಮಸ್ಯೆಗಳು ಇದ್ದರೆ ಕೂಡಲೇ ಪೊಲೀಸರನ ಸಂಪರ್ಕಿಸಿ ತಮಗೆ ನ್ಯಾಯ ಒದಗಿಸಿಕೊಡುತ್ತಾರೆ ಎಂಬ ಭರವಸೆಯನ್ನು ನೀಡಿದರು.

    ಈ ವೇಳೆ ಸಿಪಿಐ ಸುರೇಶ್, ಪಿಎಸ್ ಐಗಳಾದ ಗುರುನಾಥ್, ವಿಜಯ್ ಕುಮಾರ್, ದಲಿತ ಮುಖಂಡರು ಹಾಗೂ ಪೊಲೀಸರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.