ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಬ್ಸಿಡಿ ಸಾಲ ನೀಡಲು ಹಣದ ಆಮಿಷವೊಡ್ಡಿದ್ದ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಡಿಕೇರಿ ಕಚೇರಿ ಸಿಬ್ಬಂದಿಗಳಾದ ಚಂದ್ರಶೇಖರ್ ಹಾಗು ಚೆಲುವಾಂಬಾ ಬಂಧಿತ ಅಧಿಕಾರಿಗಳಾಗಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಬ್ಸಿಡಿ ಆಧಾರಿತ ಸಾಲ ಯೋಜನೆಯಡಿ ಮಹಿಳೆಯೋರ್ವರು ಕೋಳಿ ಅಂಗಡಿಗಾಗಿ 2021ರ ಅಕ್ಟೋಬರ್ ನಲ್ಲಿ 3 ಲಕ್ಷ ರೂ. ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮಹಿಳೆಗೆ ಮೊದಲ ಹಂತದ ಹಣ ಪಾವತಿಯಾಗಿತ್ತು. 2ನೇ ಹಂತದ 1 ಲಕ್ಷ ರೂ. ಹಣ ಬಿಡುಗಡೆಗೆ ಆರೋಪಿಗಳು 10 ಸಾವಿರ ರೂ.ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಹಿನ್ನೆಲೆ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ವಿಜಯಲಕ್ಷ್ಮೀ ಅವರಿಂದ 10 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


