ತುಮಕೂರು: ಉತ್ತರಪ್ರದೇಶದ ಆಗ್ರಾದಲ್ಲಿ ನಡೆದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಎಸ್ ಬಿ ಜಿ ವಿದ್ಯಾಲಯ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಇತ್ತೀಚಿಗಷ್ಟೇ ದೈಹಿಕ ಶಿಕ್ಷಕರಾದ CP ಉದಯ್,ಗಿರಿಧರ್ ಮತ್ತು ಶಂಕರ್ ರವರ ನೇತೃತ್ವದಲ್ಲಿ ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಜಯಭೇರಿ ಬಾರಿಸಿದ್ದ ಎಸ್.ಬಿ.ಜಿ ವಿದ್ಯಾಲಯ, ನೆನ್ನೆ ನಡೆದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಶ್ರೀ ಪ್ರಸನ್ನಾನಂದ ಸ್ವಾಮಿಗಳು ಶುಭ ಹಾರೈಸಿದ್ದಾರೆ.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz