ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಿ.ಹೊಸಳ್ಳಿಯ ಎಸ್.ಬಿ.ಕೆ. ಕ್ರಿಕೆಟರ್ಸ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ನಡೆಯಿತು.
ಸಮಾಜ ಸೇವಕ ಬಿ.ಆರ್.ಶಶಿಧರ್, ಕೆ ಎಂಎಫ್ ನಿರ್ದೇಶಕ ಪ್ರಕಾಶ್ ಮತ್ತು ಅಭಿ ಡೆಂಟಲ್ ಕ್ಲಿನಿಕ್ ನ ಡಾ.ಬಸವ ಪ್ರಸಾದ್ ಕಾರ್ಯಕ್ರಮವನ್ನು ಬ್ಯಾಟ್ ಬೀಸುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಬಳುವನೇರಲು ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮ, ಹಾಲ್ಕುರ್ಕೆ ಗ್ರಾ.ಪಂ. ಅಧ್ಯಕ್ಷ ಉಮಾಮಹೇಶ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಮತ್ತಿಹಳ್ಳಿ ಗ್ರಾಪಂ ಸದಸ್ಯ ಹರೀಶ್ ಗೌಡ, ಪ್ರಮೀಳಾ ಅಡವೀಶ್, ಮುಖಂಡರಾದ ಗಂಗಾಧರ್, ಚಿದಾನಂದ್ ಮತ್ತು ಶಂಕರಲಿಂಗಪ್ಪ ಸೇರಿದಂತೆ ಎಸ್.ಬಿ.ಕೆ. ಕ್ರಿಕೆಟರ್ಸ್ ನ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB