ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಮೀಸಲಾತಿ ಹೆಚ್ಚಳ ಮಾಡಲು ನಿರ್ಧಾರ ಕೈಗೊಂಡಿದೆ.
ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್ ಸಿ ಮೀಸಲಾತಿ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಲು ಹಾಗೂ ಎಸ್ ಟಿ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು.
ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ನಾಳೆಯೇ ಸರ್ಕಾರದಿಂದ ಅಧಿಕೃತ ಮುದ್ರೆ ಬೀಳಲಿದ್ದು, ನಾಳಿನ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


