ತಿಪಟೂರು: ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯು, ನಗರದ ಕಲ್ಪತರು ಸಭಾಂಗಣ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಅಶೋಕ್, ಗೌಡನಕಟ್ಟೆ ದಲಿತರಿಗೆ ಈ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಗಳ ಬಗ್ಗೆ ತಹಸೀಲ್ದಾರ್ ಅವರ ಗಮನ ಸೆಳೆದರು.
ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗುರುಗದಹಳ್ಳಿ ಕಾಲೋನಿಯಲ್ಲಿ ಖಾಲಿ ಜಾಗವಿದ್ದು, ಈ ಜಾಗ ಪಕ್ಕದ ಮನೆಯವರು ಈ ಜಾಗ ನಮ್ಮದು ಎಂದು ಕಾಲೋನಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಸಂಬಂಧ ನಾವು ನಿಮ್ಮ ಗಮನಕ್ಕೆ ತಂದಿದ್ದೇವೆ. ಈ ಜಾಗವನ್ನು ಅಳತೆ ಮಾಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಬೇಕೆಂದು ತಹಶೀಲ್ದಾರ್ ಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಇಓ ಸುದರ್ಶನ್, ತಾಲೂಕು ಡಿಎಸ್ಎಸ್ ಅಧ್ಯಕ್ಷ ಅಶೋಕ ಗೌಡನಕಟ್ಟೆ, ತಾಲೂಕು ಉಪಾಧ್ಯಕ್ಷ ಮತ್ತಿಘಟ್ಟ ಶಿವಕುಮಾರ್, ಪರಿಶಿಷ್ಟ ಜಾತಿ-ಪರಿಶಿಷ್ಟಪಂಗಡದ ಮುಖಂಡರುಗಳು ಭಾಗಿಯಾಗಿದ್ದರು.
ವರದಿ: ಮಂಜು ಗುರುಗದಹಳ್ಳಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB