ಹುಬ್ಬಳ್ಳಿ : ಮೀಸಲಾತಿ ಶೇ.50 ಕ್ಕಿಂತ ಹೆಚ್ಚಳ ಅಸಾಧ್ಯ ಎಂದು ಕೇಂದ್ರ ಸರ್ಕಾರ ಯಾವ ಹಿನ್ನೆಲೆಯಲ್ಲಿ ಲಿಖಿತ ಉತ್ತರ ನೀಡಿದೆ ಎಂದು ಪರಿಶೀಲಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು. ಮೀಸಲಾತಿ ಹೆಚ್ಚಳವನ್ನು ರಾಜ್ಯ ಸರ್ಕಾರ ನಿಯಮಬದ್ಧವಾಗಿ ಮಾಡಿದೆ.
ಹೀಗಾಗಿ ಮೀಸಲಾತಿ ಹೆಚ್ಚಳ ಕೈಬಿಡಲಿದೆ ಎಂಬ ಆತಂಕ ಬೇಡ. ಅವರ ಮೀಸಲಾತಿ ಹೆಚ್ಚಳ ಸರ್ಕಾರ ಹಾಗೂ ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಕೇಂದ್ರ ಸರ್ಕಾರದ ನೀಡಿರುವ ಲಿಖಿತ ಉತ್ತರ ಯಾವ ಹಿನ್ನೆಲೆಯಲ್ಲಿ ಹೇಳಲಾಗಿದೆ ಎಂದು ಮಾಹಿತಿ ಪಡೆದು ಸ್ಪಷ್ಟವಾಗಿ ತಿಳಿಸುತ್ತೇನೆಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಅವರು ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿರುವ ವಿಚಾರ. ಈ ಕುರಿತು ರಾಷ್ಟ್ರ ನಾಯಕರು ಯಾವ ಸೂಚನೆ ನೀಡುತ್ತಾರೋ ಅದರಂತೆ ಆಗಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy