nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಗರಣ: ಬಿಜೆಪಿಯ ಡಿ.ಎಸ್.ವೀರಯ್ಯಗೆ ಜು.30ರ ವರೆಗೆ ನ್ಯಾಯಾಂಗ ಬಂಧನ
    ರಾಜ್ಯ ಸುದ್ದಿ July 17, 2024

    ಹಗರಣ: ಬಿಜೆಪಿಯ ಡಿ.ಎಸ್.ವೀರಯ್ಯಗೆ ಜು.30ರ ವರೆಗೆ ನ್ಯಾಯಾಂಗ ಬಂಧನ

    By adminJuly 17, 2024No Comments1 Min Read
    ds veeraiah

    ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಯಮಿತ(ಡಿಡಿಯುಟಿಟಿಎಲ್)ದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿಯಮಿತದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅವರನ್ನು ಜು.30ರವರೆಗೂ ನ್ಯಾಯಾಂಗ ಬಂಧನಕ್ಕೆ ವಹಿಸಿ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

    ಡಿ.ಎಸ್.ವೀರಯ್ಯ ಅವರ ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ಮಾಹಿತಿ ಪಡೆದ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಮತ್ತೊಂದೆಡೆ ಡಿ.ಎಸ್.ವೀರಯ್ಯ ಅವರ ಪರ ವಕೀಲ ಶ್ಯಾಮ್‍ ಸುಂದರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.


    Provided by
    Provided by

    2021–23ರ ನಡುವಿನ ಅವಧಿಯಲ್ಲಿ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಯಮಿತ(ಡಿಡಿಯುಟಿಟಿಎಲ್)ದ ಅಧ್ಯಕ್ಷರಾಗಿದ್ದಾಗ 47.10 ಕೋಟಿ ರೂ. ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ನಿಯಮಿತದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಸಾದ್ ಅವರು ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಸುಮಾರು 2 ಕೋಟಿ ರೂ. ಮೌಲ್ಯದ ಕೆಲಸಗಳನ್ನು ಟೆಂಡರ್ ಕರೆಯದೇ ಗುತ್ತಿಗೆ ನೀಡಬಹುದು ಎನ್ನುವ ರೀತಿಯಲ್ಲಿ ನಿಯಮಿತದ ದಾಖಲೆಗಳನ್ನು ತಿರುಚಲಾಗಿದೆ ಎಂಬುದಾಗಿ ಆರೋಪಿಸಲಾಗಿತ್ತು.

    ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಯಡಿ ಸರಕಾರದ ಯಾವುದೇ ನಿಗಮವು ಐದು ಲಕ್ಷಕ್ಕೂ ಹೆಚ್ಚು ಮೌಲ್ಯದ ಗುತ್ತಿಗೆ ಕೆಲಸವನ್ನು ಟೆಂಡರ್ ಮೂಲಕ ನಡೆಸಬೇಕು ಎಂದಿದೆ. ಇದಕ್ಕೆ ವಿರುದ್ಧವಾಗಿ ಗುತ್ತಿಗೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಡಿ.ಎಸ್.ವೀರಯ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಖೆ ಸಂಬಂಧ ಅವರನ್ನು ವಶಕ್ಕೆ ಪಡೆದುಕೊಂಡಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ…

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.