ಪಾವಗಡ: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಬಗ್ಗೆ ಅರ್ಜಿಯನ್ನು ನವೆಂಬರ್ 26ರ ಒಳಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕರಾದ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
ತುಮಕೂರು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯನ್ನು ಇದೇ ತಿಂಗಳ ನವಂಬರ್ 28 ರಂದು ಬೆಳಗ್ಗೆ 11 ಗಂಟೆಗೆ ಬಾಲಾ ಭವನ ಎಂ.ಜಿ.ರಸ್ತೆ ತುಮಕೂರಿನಲ್ಲಿ ಏರ್ಪಡಿಸಿದ್ದು, ಪಾವಗಡ ತಾಲೂಕಿನ ವ್ಯಾಪ್ತಿಯ ದಲಿತರ ಕುಂದು ಕೊರತೆಯ ಬಗ್ಗೆ ಸಹಾಯಕ ನಿರ್ದೆಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ನವಂಬರ್ 26ರ ಒಳಗಾಗಿ ಲಿಖಿತ ರೂಪದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹಾಗೂ ಅರ್ಜಿ ಸ್ವೀಕೃತಪ್ರತಿಯೊಂದಿಗೆ ಸಭೆಗೆ ಹಾಜರಾಗಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q