nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ
    ತುಮಕೂರು October 16, 2024

    ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ

    By adminOctober 16, 2024No Comments2 Mins Read
    SCP TSP Scheme

    ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 19ರಂದು ಮಧ್ಯಾಹ್ನ 2:30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ನೇರವಾಗಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು.


    Provided by
    Provided by

    ಸ್ವೀಕೃತ ಅಹವಾಲುಗಳನ್ನು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಸಮಿತಿಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರಲ್ಲದೆ, ಕಳೆದ 2021–22, 2022–23, 2024–24, ಹಾಗೂ 2024ನೇ ಸೆಪ್ಟೆಂಬರ್ ಮಾಹೆವರೆಗಿನ ಸಮರ್ಪಕ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಿರಬೇಕೆಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.