ಚಿಕ್ಕಬಳ್ಳಾಪುರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಆದರೆ, ಸಚಿವರುಗಳು ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ತಾಲ್ಲೂಕಿನ ನುಗುತಹಳ್ಳಿಯಲ್ಲಿ ಮಳೆಯಿಂದ ಹಾನಿಗೆ ಒಳಗಾದ ರೈತರ ಜಮೀನುಗಳನ್ನು ಬುಧವಾರ ವೀಕ್ಷಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಹಳಷ್ಟು ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆದರೆ, ಯಾವ ಸಚಿವರು ರೈತರ ಕಷ್ಟ ಕೇಳುತ್ತಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಟೀಕಿಸಿದ ಮೇಲೆ ಮುಖ್ಯಮಂತ್ರಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700