ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಚಿಕ್ಕಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಸೋಮವಾರದಂದು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಮುತ್ತುರಾಜು, ಶ್ರದ್ಧೆಯಿಂದ ಚೆನ್ನಾಗಿ ಶಿಕ್ಷಣಭ್ಯಾಸವನ್ನು ಮಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಚೆನ್ನಾಗಿ ಓದಿಕೊಂಡು ಸಮಾಜದಲ್ಲಿ ಉನ್ನತ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು ಮತ್ತು ಶಾಲೆಯ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಮಾರ್ತೀಶ್, ಸೋಮಶೇಖರ್, ರಾಜಕುಮಾರ್, ನರಸಿಂಹಮೂರ್ತಿ, ತಿಪ್ಪೇಸ್ವಾಮಿ, ಲತಾ, ಮತ್ತು ಶಿಕ್ಷಕ ವೃಂದ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA